ಬೆಂಗಳೂರು : ನಾಡಪ್ರಭು ಕೆಂಪೇಗೌಡರ 516 ನೇ ಜಯಂತಿ ಉತ್ಸವ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಳಿ ಇರುವ ಅವತಿ ಗ್ರಾಮದಲ್ಲಿ ಜ್ಯೋತಿ ಹೊತ್ತ ರಥಕ್ಕೆ ಸಚಿವ ಕೆಎಚ್ ಮುನಿಯಪ್ಪ ಅವರು ಚಾಲನೆ ನೀಡಿದರು. ಅವತಿ ಗ್ರಾಮದ ಚೆನ್ನಕೇಶವ ಸ್ವಾಮಿ ದೇಗುಲದಲ್ಲಿ ಕೆ ಎಚ್ ಮುನಿಯಪ್ಪ ಅವರು ಪೂಜೆ ಸಲ್ಲಿಸಿ ರಥಕ್ಕೆ ಚಾಲನೆ ನೀಡಿದರು.
ಜ್ಯೋತಿ ಹೊತ್ತ ರಥಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಚಿವರು, ಅವತಿ ಗ್ರಾಮದಲ್ಲಿ ನಾಡಪ್ರಭು ಕೆಂಪೇಗೌಡರ ಸ್ಮಾರಕ ಭವನ ನಿರ್ಮಾಣ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. 9 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡರ ಸ್ಮಾರಕ ಭವನ ನಿರ್ಮಾಣ ಆಗಲಿದೆ ಎಂದು ಅವತಿ ಗ್ರಾಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆಎಚ್ ಮುನಿಯಪ್ಪ ಹೇಳಿಕೆ ನೀಡಿದ್ದಾರೆ.
ಕೆಂಪೇಗೌಡರ ವಂಶಸ್ಥರ ಜನ್ಮಸ್ಥಳವಾದ ಅವತಿ ಗ್ರಾಮದಲ್ಲಿ ಸ್ಮಾರಕ ನಿರ್ಮಾಣ ಆಗಲಿದೆ ಕೆಂಪೇಗೌಡರು ಮತ್ತು ಅವರ ಜೀವನ ಚರಿತ್ರೆ ತಿಳಿಸುವ ಸ್ಮಾರಕ ನಿರ್ಮಾಣ ಆಗಲಿದೆ. ಇನ್ನೊಂದು ವಾರದಲ್ಲಿ ಸ್ಮಾರಕ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆಎಚ್ ಮುನಿಯಪ್ಪ ಹೇಳಿಕೆ ನೀಡಿದರು.