ಯಾದಗಿರಿ : ಯಾದಗಿರಿಯಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದ ಇಬ್ಬರೂ ಯುವಕರು ಭೀಮಾ ನದಿಯಲ್ಲಿ ಕೊಚ್ಚಿ ಹೋಗಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಮಾಚನೂರು ಬಳಿ ಈ ದುರ್ಘಟನೆ ಸಂಭವಿಸಿದೆ.
ಸಿದ್ದಪ್ಪಾ (20) ರಾಮು (18) ಯುವಕರು ಭೀಮಾನದಿಯಲ್ಲಿ ಕೊಚ್ಚಿ ಹೋಗಿದ್ದಾರೆ. ಬೆಳಿಗ್ಗೆ ಜಾನುವಾರುಗಳನ್ನು ಮೇಯಿಸಲು ಇಬ್ಬರು ಯುವಕರು ತೆರಳಿದ್ದಾರೆ. ಯುವಕರು ನೀರು ಪಾಲಾದ ಬಗ್ಗೆ ಅಗ್ನಿಶಾಮಕ ದಳಕ್ಕೆ ಸ್ಥಳೀಯರು ತಕ್ಷಣ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ವಡಗೆರ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.








