ವಿಜಯಪುರ : ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ ವಿಚಾರವಾಗಿ ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಖುರ್ಚಿ ಕಾಲಿ ಇಲ್ಲ ಎಂದು ವಿಜಯಪುರ ನಗರದಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹೇಳಿಕೆ ನೀಡಿದರು.
ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಚಾರ ಹಾಗೂ ಪಕ್ಷದ ಅಧ್ಯಕ್ಷರ ಬದಲಾವಣೆ ವಿಚಾರ ಹಾಗು ಸಚಿವ ಸಂಪುಟ ರಚನೆ ವಿಚಾರ ಇದೆಲ್ಲವೂ ಹೈಕಮಾಂಡ್ ಅವರಿಗೆ ಬಿಟ್ಟಿದ್ದು ಈ ವಿಚಾರಗಳು ಇಕ್ಬಾಲ್ ಕೈನಲ್ಲೂ ಇಲ್ಲ ನನ್ನ ಕೈನಲ್ಲೂ ಇಲ್ಲ ಎಂದು ಶಾಸಕ ಇಕ್ಬಾಲ್ ಹೇಳಿಗೆಗೆ ಸಚಿವ ಎಂಬಿ ಪಾಟೀಲ್ ಅವರು ತಿರುಗೇಟು ನೀಡಿದರು.
ಇನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರವಾಗಿ ಮಾತನಾಡಿದ ಸಚಿವ ಎಂ ಬಿ ಪಾಟೀಲ್, ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ.ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿ ಎಂದು ಕೇಳಿಲ್ಲ. ಒಂದು ವೇಳೆ ಅಧ್ಯಕ್ಷ ಸ್ಥಾನ ನೀಡಿದರೆ ನೋಡೋಣ ಎಂದು ವಿಜಯಪುರ ನಗರದಲ್ಲಿ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹೇಳಿಕೆ ನೀಡಿದರು.








