Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಾಯುವ್ಯ ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿಗೆ 13 ಸೈನಿಕರು ಬಲಿ

28/06/2025 2:56 PM

BIG NEWS: ಹೀಗಿದೆ ‘ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2025’ರ ಕಾರ್ಯಕ್ರಮದ ಸಂಪೂರ್ಣ ವಿವರ | Mysore Dasara 2025

28/06/2025 2:54 PM

ಹೈಡ್ರೋಜನ್ ವಾಹನಗಳಿಗೆ ‘ದ್ವಿ-ಬಣ್ಣದ ನಂಬರ್ ಪ್ಲೇಟ್’ ; ಕೇಂದ್ರ ಸರ್ಕಾರ ಮಹತ್ವದ ಪ್ರಸ್ತಾಪ

28/06/2025 2:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಹೀಗಿದೆ ‘ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2025’ರ ಕಾರ್ಯಕ್ರಮದ ಸಂಪೂರ್ಣ ವಿವರ | Mysore Dasara 2025
KARNATAKA

BIG NEWS: ಹೀಗಿದೆ ‘ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2025’ರ ಕಾರ್ಯಕ್ರಮದ ಸಂಪೂರ್ಣ ವಿವರ | Mysore Dasara 2025

By kannadanewsnow0928/06/2025 2:54 PM

ಬೆಂಗಳೂರು: ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಕುರಿತು ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಸೂಚನೆಗಳನ್ನು ನೀಡಿದರು.

ಸರ್ಕಾರದ ಸಾಧನೆಗಳು, ನಾವು ಪ್ರತೀ ಇಲಾಖೆಯಲ್ಲೂ ಜಾರಿ ಮಾಡಿರುವ ಜನಪರ ಕಾರ್ಯಕ್ರಮಗಳು ಜನರಿಗೆ ಸಮರ್ಪಕವಾಗಿ ಮನವರಿಕೆ ಆಗುವ ರೀತಿಯಲ್ಲಿ ಯೋಜನೆ ರೂಪಿಸಬೇಕು.

ಈ ಬಾರಿ ರಾಜ್ಯದಾದ್ಯಂತ ಮಳೆ ಬೆಳೆ ಉತ್ತಮವಾಗಿದ್ದು, ನದಿ, ಕೆರೆಗಳು ತುಂಬಿದ್ದು, ವೈಭವದಿಂದ ದಸರಾ ಆಚರಿಸಲಾಗುವುದು.

• ಸೆಪ್ಟಂಬರ್‌ 22ರಂದು ದಸರಾ ಹಬ್ಬಕ್ಕೆ ಚಾಲನೆ ದೊರೆಯಲಿದ್ದು, ಅಕ್ಟೋಬರ್‌ 2ರಂದು ವಿಜಯದಶಮಿ, ಜಂಬೂ ಸವಾರಿ ನಡೆಯಲಿದೆ. ದಸರಾ ಈ ಬಾರಿ 10ದಿನಗಳ ಬದಲು 11ದಿನಗಳ ಕಾಲ ನಡೆಯಲಿದೆ.

• ದಸರಾಕ್ಕೆ ತನ್ನದೇ ಆದ ಚಾರಿತ್ರಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯಿದ್ದು, ಇದಕ್ಕೆ ಪೂರಕವಾಗಿ ದಸರಾ ಆಚರಿಸಲಾಗುವುದು.
• ವಿಶ್ವ ವಿಖ್ಯಾತ ದಸರಾದ ಪರಂಪರೆಯನ್ನು ಮುಂದುವರೆಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು.

• ಕಳೆದ ವರ್ಷ ದಸರಾ ಆಚರಣೆಗೆ ಒಟ್ಟು ರೂ. 40 ಕೋಟಿ ಅನುದಾನ ಒದಗಿಸಲಾಗಿತ್ತು. ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆಗೆ ಬೇಕಾದಷ್ಟು ಅನುದಾನವನ್ನು ಒದಗಿಸಲಾಗುವುದು.
• ಸರ್ಕಾರದ ಸಾಧನೆಗಳನ್ನು ಮತ್ತು ಇಲಾಖಾ ಕಾರ್ಯಕ್ರಮಗಳನ್ನು ಸರಿಯಾಗಿ ಪ್ರತಿಬಿಂಬಿಸುವಂತಹ ವಸ್ತು ಪ್ರದರ್ಶನ, ಸ್ತಬ್ಧಚಿತ್ರ ಪ್ರದರ್ಶನ ಆಯೋಜಿಸಬೇಕು. ಅಕ್ಟೋಬರ್‌ 2ರಂದು ವಿಜಯದಶಮಿ ಬಂದಿರುವ ಕಾರಣ ಸ್ತಬ್ಧ ಚಿತ್ರಗಳಲ್ಲಿ ಗಾಂಧೀಜಿ ವಿಚಾರಧಾರೆಗಳಿಗೆ ಸಹ ಅವಕಾಶ ಕಲ್ಪಿಸಬೇಕು.

• ಕಲ್ಯಾಣ ಕಾರ್ಯಕ್ರಮಗಳು, ಗ್ಯಾರಂಟಿ ಯೋಜನೆಗಳ ಮಾಹಿತಿ ಒದಗಿಸಲು ವ್ಯವಸ್ಥೆ ಮಾಡಬೇಕು.

• ದಸರಾ ಸಂದರ್ಭದಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಬೇಕು. 10ಲಕ್ಷಕ್ಕೂ ಹೆಚ್ಚು ಮಂದಿ ಸೇರುವ ಸಂದರ್ಭ ಇದಾಗಿದೆ. ವಿದೇಶಿಗರೂ ಹೆಚ್ಚಿನ ಪ್ರಮಾಣದಲ್ಲಿ ಆಗಮಿಸುತ್ತಾರೆ. ಯಾವುದೇ ಕಾರಣಕ್ಕೂ ಅನಾಹುತ ಸಂಭವಿಸದಂತೆ ಎಲ್ಲಾ ಕಡೆ ಮುನ್ನೆಚ್ಚರಿಕೆ ವಹಿಸಬೇಕು.

• ಅರಮನೆ ಮುಂಭಾಗದಲ್ಲಿ ಆಸನದ ವ್ಯವಸ್ಥೆಯನ್ನು ಕಳೆದ ಬಾರಿಗಿಂತ ಈ ಬಾರಿ ಕಡಿಮೆ ಮಾಡಿ ಜನದಟ್ಟಣೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಿ.

• ಪೊಲೀಸರು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು.

• ಚಾಮುಂಡಿ ಬೆಟ್ಟಕ್ಕೆ ಹೋಗುವ ರಸ್ತೆ, ಕೆಆರ್‌ಎಸ್‌ಗೆ ಹೋಗುವ ರಸ್ತೆ ಸೇರಿದಂತೆ ಎಲ್ಲಾ ಪ್ರಮುಖ ರಸ್ತೆಗಳನ್ನು ದುರಸ್ತಿ ಮಾಡುವ ಕಾರ್ಯವನ್ನು ಈಗಲೇ ಆರಂಭಿಸಬೇಕು.

• ಜಾನಪದ ಕಲೆಗಳನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಬೇಕು. ಜಾನಪದ ಪ್ರದರ್ಶನದಲ್ಲಿ ಏಕತಾನತೆ ಇಲ್ಲದಂತೆ ನೋಡಿಕೊಳ್ಳಬೇಕು.

• ಕಳೆದ ಬಾರಿ ವಿದ್ಯುತ್‌ ದೀಪ ಅಲಂಕಾರವನ್ನು ವೈಭವದಿಂದ ಮಾಡಲಾಗಿತ್ತು. ಇದಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈ ಬಾರಿಯೂ ವಿದ್ಯುತ್‌ ದೀಪಾಲಂಕಾರವನ್ನು ಇನ್ನಷ್ಟು ಉತ್ತಮವಾಗಿ ಮಾಡಬೇಕು.

• ಎಲ್ಲಾ ಜಿಲ್ಲೆಗಳಿಂದ ಆಗಮಿಸುವ ಸ್ತಬ್ಧಚಿತ್ರಗಳು ವೈವಿಧ್ಯಮಯವಾಗಿರುವಂತೆ ನೋಡಿಕೊಳ್ಳಬೇಕು.

• ವಸ್ತು ಪ್ರದರ್ಶನದ ಮಳಿಗೆಗಳು ಉದ್ಘಾಟನೆ ಸಂದರ್ಭದಲ್ಲೇ ಪೂರ್ಣ ಪ್ರಮಾಣದಲ್ಲಿ ಸಜ್ಜುಗೊಂಡಿರಬೇಕು. ಯಾವುದೇ ಮಳಿಗೆಗಳು ಖಾಲಿಯಿರಬಾರದು.

• ಗೋಲ್ಡ್ ಕಾರ್ಡ್‌ ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ವಿತರಿಸಬೇಕು.

• ಮೈಸೂರು ನಗರದ ಸೌಂದರ್ಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು.

• ದಸರಾ ವೀಕ್ಷಿಸಲು ಆಗಮಿಸುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಶೌಚಾಲಯ, ವಾಹನ ಪಾರ್ಕಿಂಗ್‌ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಬೇಕು.

• ಈ ಬಾರಿಯೂ ದೊಡ್ಡ ಪ್ರಮಾಣದಲ್ಲಿ ಡ್ರೋಣ್‌ ಶೋ ಆಯೋಜಿಸಲಾಗುವುದು.

• ದಸರಾ ಸಂದರ್ಭದಲ್ಲಿ ಅಧಿಕಾರಿಗಳು ಜನಸಾಮಾನ್ಯರಿಗೆ ದೊರೆಯುವುದಿಲ್ಲ ಎಂಬ ದೂರುಗಳಿದ್ದು, ಇದಕ್ಕೆ ಈ ಬಾರಿ ಅವಕಾಶ ನೀಡಬಾರದು. ಜನಸಾಮಾನ್ಯರ ಕೆಲಸ ಕಾರ್ಯಗಳು, ಅಭಿವೃದ್ದಿ ಕಾರ್ಯಗಳು ಯಾವುದೇ ಕಾರಣಕ್ಕೂ ಕುಂಠಿತವಾಗಬಾರದು.

• ಈ ಬಾರಿ ದಸರಾ ಉದ್ಘಾಟನೆಗೆ ಯಾರನ್ನು ಆಹ್ವಾನಿಸಬೇಕು ಎಂಬುವುದನ್ನು ಮುಖ್ಯಮಂತ್ರಿ ಅವರ ವಿವೇಚನೆಗೆ ಬಿಡಲು ಸಭೆಯಲ್ಲಿ ನಿರ್ಧರಿಸಲಾಯಿತು.

• ಕಳೆದ ಬಾರಿ ಅರಮನೆ ಮುಂದೆ ಆಸನ ವ್ಯವಸ್ಥೆಯನ್ನು 54 ಸಾವಿರಕ್ಕೆ ಹೆಚ್ಚಿಸಲಾಗಿತ್ತು. ಇದರಿಂದಾಗಿ ಜಂಬೂ ಸವಾರಿ ಸಂದರ್ಭದಲ್ಲಿ ಜನದಟ್ಟಣೆ ಉಂಟಾಗಿತ್ತು. ಈ ಬಾರಿ ಜನದಟ್ಟಣೆ ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕಾಗಿದೆ. ಯಾವುದೇ ಕಾರ್ಯಕ್ರಮಗಳ ಸ್ಥಳಗಳಲ್ಲಿ ಯಾವುದೇ ಕಾರಣಕ್ಕೂ ಜನದಟ್ಟಣೆಯಾಗದಂತೆ ಎಚ್ಚರಿಕೆ ವಹಿಸಬೇಕು. ಪ್ರಜಾಪ್ರಭುತ್ವ, ಸಂವಿಧಾನ, ಅಭಿವೃದ್ಧಿ, ಉತ್ತಮ ಆಡಳಿತದ ಆಶಯದಲ್ಲಿ ದಸರಾ ಆಚರಿಸಲಾಗುವುದು. – ಡಾ. ಹೆಚ್.ಸಿ.ಮಹದೇವಪ್ಪ

• ಮೈಸೂರು ದಸರಾ ಪ್ರಾಧಿಕಾರ ಸ್ಥಾಪಿಸಿ ಅದರ ಮೂಲಕ ದಸರಾ ವ್ಯವಸ್ಥಿತವಾಗಿ ಆಚರಿಸಬೇಕು. ಕುಳಿತುಕೊಳ್ಳುವ ಸ್ಥಳಾವಕಾಶ ಹೆಚ್ಚಿಸಬೇಕು. ಪಾರ್ಕಿಂಗ್‌ ವ್ಯವಸ್ಥೆಯನ್ನು ವ್ಯವಸ್ಥಿತಗೊಳಿಸಬೇಕು ಎಂದು ತನ್ವೀರ್‌ ಸೇಠ್ ತಿಳಿಸಿದರು.

• ಉತ್ತಮ ಮಳೆಯಾಗಿದ್ದು, ರೈತರು ಉತ್ತಮ ಬೆಳೆ ನಿರೀಕ್ಷೆಯಲ್ಲಿದ್ದಾರೆ. ನದಿಗಳು ತುಂಬಿದ್ದು, ಕೆಆರ್‌ಎಸ್‌ ಈ ಬಾರಿ ಬೇಗನೇ ತುಂಬಿದೆ. ಜಂಬೂ ಸವಾರಿ ಸಂದರ್ಭದಲ್ಲಿ ಕಲಾ ತಂಡಗಳನ್ನು ಹೊರತುಪಡಿಸಿ ಬೇರೆ ಯಾರೂ ಓಡಾಡಲು ಅವಕಾಶ ಮಾಡಬಾರದು. ಕಲಾ ತಂಡಗಳಲ್ಲಿ ವೈವಿಧ್ಯತೆ ಇರಬೇಕು  ಜಿ.ಟಿ.ದೇವೇಗೌಡ ಹೇಳಿದರು.

• ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಇಕೋ ಫ್ರೆಂಡ್ಲಿ ಹಸಿರು ದಸರಾ ಆಚರಿಸಲು ಕ್ರಮ ಕೈಗೊಳ್ಳಬೇಕು. ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಕ್ರಮ ಕೈಗೊಳ್ಳಬೇಕು  ಪುಷ್ಪಾ ಅಮರನಾಥ ಎಂದರು.

ಹೀಗಿದೆ ನಾಡಹಬ್ಬ ದಸರಾ ಮಹೋತ್ಸವ-2025ರ ಕಾರ್ಯಕ್ರಮದ ಸಂಪೂರ್ಣ ವಿವರ

ದಿನಾಂಕ 04-08-2025ರಂದು ಮೈಸೂರಿನ ಹುಣಸೂರು ತಾಲ್ಲೂಕಿನ ವೀರನಹೊಸಳ್ಳಿ ಗ್ರಾಮದಲ್ಲಿ ಮಧ್ಯಾಹ್ನ 12.34ರಿಂದ 12.59ರ ತುಲಾ ಲಗ್ನ(ಅಭಿಜಿನ್) ನಲ್ಲಿ ಗಜಪೂಜೆ ನೆರವೇರಲಿದೆ.

ದಿನಾಂಕ 22-09-2025ರಂದು ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಸ್ಧಾನದ ಆವರಣದಲ್ಲಿ ಬೆಳಗ್ಗೆ 10.10ರಿಂದ 10.40ರ ಶುಭ ವೃಶ್ಚಿಕ ಲಗ್ನದಲ್ಲಿ ದಸರಾ ಮಹೋತ್ಸವದ ಉದ್ಘಾಟನೆ ನೆರವೇರಲಿದೆ.

ದಿನಾಂಕ 02-10-2025ರಂದು ಮೈಸೂರಿನ ಅರಮನೆ ಕೋಟೆ ಆಂಜನೇಯ ದೇವಸ್ಥಾನದ ಆವರಣದಲ್ಲಿ ಮಧ್ಯಾಹ್ನ 1ರಿಂದ 1.18ರ ಧನುರ್ ಲಗ್ನದಲ್ಲಿ (ಲಾಭ ಕಾಲ)ದ ಸಮಯದಲ್ಲಿ ಜಂಬೂ ಸವಾರಿ, ನಂದಿ ಧ್ವಜ ಪೂಜೆ ನೆರವೇರಲಿದೆ.

ದಿನಾಂಕ 02-10-2025ರಂದು ಮೈಸೂರಿನ ಅರಮನೆ ಆವರಣದಲ್ಲಿ ಮಧ್ಯಾಹ್ನ 4.42ರಿಂದ 4.06 ಶುಭ ಕುಂಭ ಲಗ್ನದಲ್ಲಿ ವಿಶ್ವ ವಿಖ್ಯಾತ ಜಂಬೂ ಸವಾರಿಗೆ ಪುಷ್ಪಾರ್ಚನೆ ಮೂಲಕ ಚಾಲನೆ ನೀಡಲಾಗುತ್ತದೆ.

BREAKING : ಸೆ.22ಕ್ಕೆ ಮೈಸೂರು ದಸರಾಗೆ ಚಾಲನೆ, ಅ.2 ರಂದು ಜಂಬೂ ಸವಾರಿ : ಸಿಎಂ ಸಿದ್ದರಾಮಯ್ಯ ಹೇಳಿಕೆ

ಪಾಕಿಸ್ತಾನದಲ್ಲಿ ಭೀಕರ ಪ್ರವಾಹ: ಹಲವರು ಸಾವು, ಪ್ರವಾಹದಲ್ಲಿ ಕೊಚ್ಚಿಹೋದ ಕುಟುಂಬ

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ BMTC ಶಾಕ್: 5,706 ಮಂದಿಯಿಂದ 12.64 ಲಕ್ಷ ದಂಡ ವಸೂಲಿ

28/06/2025 2:36 PM2 Mins Read

BREAKING : ರಾಜ್ಯದಲ್ಲಿ CM ಬದಲಾವಣೆ ಇಲ್ಲ, ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರ್ತಾರೆ : ಯತೀಂದ್ರ ಸಿದ್ದರಾಮಯ್ಯ

28/06/2025 2:08 PM1 Min Read

BREAKING : ಸೆ.22ಕ್ಕೆ ಮೈಸೂರು ದಸರಾಗೆ ಚಾಲನೆ, ಅ.2 ರಂದು ಜಂಬೂ ಸವಾರಿ : ಸಿಎಂ ಸಿದ್ದರಾಮಯ್ಯ ಹೇಳಿಕೆ

28/06/2025 1:50 PM1 Min Read
Recent News

BREAKING : ವಾಯುವ್ಯ ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿಗೆ 13 ಸೈನಿಕರು ಬಲಿ

28/06/2025 2:56 PM

BIG NEWS: ಹೀಗಿದೆ ‘ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2025’ರ ಕಾರ್ಯಕ್ರಮದ ಸಂಪೂರ್ಣ ವಿವರ | Mysore Dasara 2025

28/06/2025 2:54 PM

ಹೈಡ್ರೋಜನ್ ವಾಹನಗಳಿಗೆ ‘ದ್ವಿ-ಬಣ್ಣದ ನಂಬರ್ ಪ್ಲೇಟ್’ ; ಕೇಂದ್ರ ಸರ್ಕಾರ ಮಹತ್ವದ ಪ್ರಸ್ತಾಪ

28/06/2025 2:46 PM

ಬೆಂಗಳೂರಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ BMTC ಶಾಕ್: 5,706 ಮಂದಿಯಿಂದ 12.64 ಲಕ್ಷ ದಂಡ ವಸೂಲಿ

28/06/2025 2:36 PM
State News
KARNATAKA

BIG NEWS: ಹೀಗಿದೆ ‘ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2025’ರ ಕಾರ್ಯಕ್ರಮದ ಸಂಪೂರ್ಣ ವಿವರ | Mysore Dasara 2025

By kannadanewsnow0928/06/2025 2:54 PM KARNATAKA 3 Mins Read

ಬೆಂಗಳೂರು: ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ…

ಬೆಂಗಳೂರಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ BMTC ಶಾಕ್: 5,706 ಮಂದಿಯಿಂದ 12.64 ಲಕ್ಷ ದಂಡ ವಸೂಲಿ

28/06/2025 2:36 PM

BREAKING : ರಾಜ್ಯದಲ್ಲಿ CM ಬದಲಾವಣೆ ಇಲ್ಲ, ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರ್ತಾರೆ : ಯತೀಂದ್ರ ಸಿದ್ದರಾಮಯ್ಯ

28/06/2025 2:08 PM

BREAKING : ಸೆ.22ಕ್ಕೆ ಮೈಸೂರು ದಸರಾಗೆ ಚಾಲನೆ, ಅ.2 ರಂದು ಜಂಬೂ ಸವಾರಿ : ಸಿಎಂ ಸಿದ್ದರಾಮಯ್ಯ ಹೇಳಿಕೆ

28/06/2025 1:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.