ಮಂಡ್ಯ : ಮೊದಲ ಬಾರಿಗೆ ಜೂನ್ ತಿಂಗಳಿನಲ್ಲೇ ಕೃಷ್ಣರಾಜ ಸಾಗರ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ನಾಳೆ ಕಾವೇರಿ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್ ಎಸ್ ಡ್ಯಾಂ ಸಂಪೂರ್ಣ ಭರ್ತಿಯಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ನಾಳೆ ಬೆಳಗ್ಗೆ 11.30 ರ ಅಭಿಜಿತ್ ಮುಹೂರ್ತದಲ್ಲಿ ಬಾಗಿನ ಅರ್ಪಣೆ ಮಾಡಲಿದ್ದಾರೆ.
ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಪೂಜಾ ಕೈಂಕರ್ಯ ನಡೆಯಲಿದ್ದು, ನಾಳೆ ಸಿಎಂ ಸಿದ್ದರಾಮಯ್ಯ ಬಾಗಿನ ಹಿನ್ನೆಲೆಯಲ್ಲಿ ಕಾವೇರಿ ನೀರಾವರಿ ನಿಗಮದಿಂದ ಸಿದ್ಧತೆ ಕೈಗೊಳ್ಳಲಾಗಿದೆ. ಡ್ಯಾಂ ಮೇಲೆ ಕನ್ನಡ ಬಾವುಟಗಳು ರಾರಾಜಿಸುತ್ತಿದ್ದು, ಬಾಗಿನ ಅರ್ಪಿಸಿ ಕಾವೇರಿ ಮಾತೆಗೆ ಸಿಎಂ ಸಿದ್ದರಾಮಯ್ಯ ಪೂಜೆ ಸಲ್ಲಿಸಲಿದ್ದಾರೆ.