ಮಂಗಳೂರು : ರಾಜ್ಯದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ಅಪ್ರಾಪ್ತ ಬಾಲಕಿಯನ್ನು ಬೀಚ್ ಗೆ ಕರೆದೊಯ್ದು ಕಾರಿನಲ್ಲೇ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.
ಇನ್ಸ್ಟಾ ಗ್ರಾಮ್ ನಲ್ಲಿ 17 ವರ್ಷದ ಅಪ್ರಾಪ್ತೆಯ ಸ್ನೇಹ ಸಂಪಾದಿಸಿದ ಕಾಮುಕ ಯುವಕ 7 ದಿನಗಳಲ್ಲಿ ಆಕೆಯನ್ನ ಪ್ರೀತಿಸುವುದಾಗಿ ಯಾಮಾರಿಸಿ ಸೋಮೇಶ್ವರ ಬೀಚ್ ಬಳಿ ಕರೆದೊಯ್ದು ಕಾರಲ್ಲೇ ಅತ್ಯಾಚಾರವೆಸಗಿದ್ದಾನೆ.
ಅಪ್ರಾಪ್ತೆಯ ದೂರಿನನ್ವಯ ಪೋಕ್ಸೋ ಕಾಯ್ದೆಯಡಿ ಅಡ್ಯಾರ್ ವಳಚ್ಚಿಲ್ ನಿವಾಸಿ ಪೇಂಟಿಂಗ್ ವೃತ್ತಿ ಮಾಡಿಕೊಂಡಿರುವ ಕೆಲ್ವಿನ್(24) ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರದಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.