ಬೆಂಗಳೂರು: 2025-26 ನೇ ಸಾಲಿಗೆ ಬಿಎಸ್.ಸಿ ನರ್ಸಿಂಗ್ ಅಂಡ್ ಜಿಎನ್ಎಂ ನರ್ಸಿಂಗ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು https://sevasindhuservices.karnataka.gov.in ಲಿಂಕ್ ಮೂಲಕ ಅರ್ಜಿ ಸಲ್ಲಿಸಬೇಕು. ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮತ್ತು ಎನ್ಪಿಸಿಐ ಮ್ಯಾಪಿಂಗ್ ಆಕ್ಟಿವ್ ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು.
ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು. ಕೋರ್ಸ್ ಅವಧಿ ಪೂರ್ಣಾವಧಿಯದ್ದಾಗಿರುತ್ತದೆ, ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು.
ಹೆಚ್ಚಿನ ವಿವರಗಳಿಗೆ ವೆಬ್ಸೈಟ್ https://dom.karnataka.gov.in ನ್ನು ವೀಕ್ಷಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
SSLC ವಿದ್ಯಾರ್ಥಿಗಳೇ ಗಮನಿಸಿ: ಪರೀಕ್ಷೆ-3ಕ್ಕೆ ಉಚಿತವಾಗಿ ಬಿಎಂಟಿಸಿ ಬಸ್ಸಿನಲ್ಲಿ ತೆರಳಲು ಅವಕಾಶ