ಬೆಂಗಳೂರು: ಹಾಸನದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚು ಹೆಚ್ಚು ಘಟಿಸುತ್ತಿವೆ. ಈ ಹಿನ್ನಲೆಯಲ್ಲಿ ರಾಜ್ಯಾಧ್ಯಂತ ಎಲ್ಲಾ ತಾಲ್ಲೂಕುಗಳಲ್ಲಿ ಸ್ಟೆಮಿ ಯೋಜನೆಯನ್ನು ವಿಸ್ತರಿಸಿ ಸರ್ಕಾರ ಆದೇಶಿಸಿದೆ. ಈ ಮೂಲಕ ಇನ್ಮುಂದೆ ತಾಲ್ಲೂಕು ಕೇಂದ್ರಗಳಲ್ಲೂ ಹೃದಯಾಘಾತಕ್ಕೆ ಒಳಗಾದವರಿಗೆ ತಕ್ಷಣವೇ ಚಿಕಿತ್ಸೆ ದೊರಕಿಸಿಕೊಡುವಂತ ಕೆಲಸವನ್ನು ರಾಜ್ಯ ಸರ್ಕಾರ ಮಾಡಿದೆ.
ಈ ಬಗ್ಗೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಮಾಹಿತಿ ಹಂಚಿಕೊಂಡಿದ್ದು, ರಾಜ್ಯಾಧ್ಯಂತ ಎಲ್ಲಾ ತಾಲ್ಲೂಕುಗಳಲ್ಲಿ ಸ್ಟೆಮಿ ಯೋಜನೆ ವಿಸ್ತರಣೆ ಮಾಡಲಾಗುತ್ತಿದೆ. ಈ ಮೊದಲು 86 ತಾಲ್ಲೂಕು ಕೇಂದ್ರಗಳಲ್ಲಿ ಮಾತ್ರವೇ ಸ್ಟೆಮಿ ಯೋಜನೆ ಇತ್ತು. ಮುಂದಿನ ವರ್ಷದೊಳಗೆ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲೂ ಯೋಜನೆ ಆರಂಭಗೊಳ್ಳಲಿದೆ ಎಂದರು.
ಅಂದಹಾಗೇ ರಾಜ್ಯ ಸರ್ಕಾರ ರಾಜ್ಯಾಧ್ಯಂತ ವಿಸ್ತರಿಸುತ್ತಿರುವಂತ ಸ್ಟೆಮಿ ಯೋಜನೆ ಅಂದರೆ ಹಬ್ ಆಂಡ್ ಸ್ಟೋಕ್ ಮಾಡೆಲ್ ಎಂಬುದಾಗಿದೆ. ಈ ಯೋಜನೆಯ ಅಡಿಯಲ್ಲಿ ತಾಲ್ಲೂಕು ಕೇಂದ್ರಗಳಲ್ಲೇ ಹೃದಯಾಘಾತಕ್ಕೆ ಒಳಗಾದವರಿಗೆ ತುರ್ತು ವೈದ್ಯಕೀಯ ನೆರವು ಸಿಗಲಿದೆ. ಆ ಮೂಲಕ ಪ್ರಾಣಾಪಾಯದಿಂದ ಹೃದಯಾಘಾತಕ್ಕೆ ಒಳಗಾದವರನ್ನು ಪಾರು ಮಾಡುವಂತ ಚಿಕಿತ್ಸಾ ವಿಧಾನ ಇದಾಗಿದೆ.
SSLC ವಿದ್ಯಾರ್ಥಿಗಳೇ ಗಮನಿಸಿ: ಪರೀಕ್ಷೆ-3ಕ್ಕೆ ಉಚಿತವಾಗಿ ಬಿಎಂಟಿಸಿ ಬಸ್ಸಿನಲ್ಲಿ ತೆರಳಲು ಅವಕಾಶ
BIG NEWS: 2028ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ: ಸಿಎಂ ಸಿದ್ಧರಾಮಯ್ಯ ಸ್ಪಷ್ಟ ಘೋಷಣೆ
BREAKING: ತೆಲಂಗಾಣ ಕೈಗಾರಿಕಾ ಘಟಕದಲ್ಲಿ ಭೀಕರ ಸ್ಫೋಟ: 10 ಮಂದಿ ಸಾವು, ಹಲವರಿಗೆ ಗಾಯ