Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM

BREAKING: ಭವಾನಿಪುರದಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಸೋಲು, ಅಧಿಕಾರದತ್ತ ಬಿಜೆಪಿ!

04/05/2026 9:43 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಐದು ಹುಲಿ ಸಾವು ಪ್ರಕರಣ: ರಾಜ್ಯ ಸರ್ಕಾರದಿಂದ ಮೂವರು ಅಧಿಕಾರಿಗಳಿಗೆ ಕಡ್ಡಾಯ ರಜೆ ಶಿಕ್ಷೆ
KARNATAKA

ಐದು ಹುಲಿ ಸಾವು ಪ್ರಕರಣ: ರಾಜ್ಯ ಸರ್ಕಾರದಿಂದ ಮೂವರು ಅಧಿಕಾರಿಗಳಿಗೆ ಕಡ್ಡಾಯ ರಜೆ ಶಿಕ್ಷೆ

By kannadanewsnow0901/07/2025 6:10 AM

ಬೆಂಗಳೂರು: ಚಾಮರಾಜ ನಗರ ಜಿಲ್ಲೆಯ ಮಲೆಮಹದೇಶ್ವರ ವನ್ಯಜೀವಿ ಪ್ರದೇಶದಲ್ಲಿ ಐದು ಹುಲಿಗಳು ಸಾವನ್ನಪ್ಪಿದ್ದವು. ಈ ಪ್ರಕರಣ ಸಂಬಂಧ ಉಪ ಅರಣ್ಯ ಸಂರಕ್ಷಣಾಧಿಕಾರಿ, ಸಹಾಯ ಅರಣ್ಯ ಸಂರಕ್ಷಣಾಧಿಕಾರಿಗಳನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಅಲ್ಲದೇ ತನಿಖೆಯ ವರದಿ ಬಂದ ನಂತ್ರ ಶಿಸ್ತು ಕ್ರಮ ಜರುಗಿಸುವುದಾಗಿ ತಿಳಿಸಿದೆ.

ಈ ಸಂಬಂಧ ಅರಣ್ಯ ಪಡೆ ಮುಖ್ಯಸ್ಥರು ಹಾಗೂ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ಹೊರಡಿಸಿದ್ದು, ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು, ಕರ್ನಾಟಕ ಸರ್ಕಾರ ರವರ ಉಲ್ಲೇಖಿತ ಟಿಪ್ಪಣಿಯಲ್ಲಿ ಮಲೈಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗದಲ್ಲಿ ಒಂದು ತಾಯಿ ಹುಲಿ ಮತ್ತು ನಾಲ್ಕು ಮರಿಗಳು ಅಸಹಜ ಸಾವಿಗಾಡಿರುವುದು ಅತ್ಯಂತ ನೋವಿನ ಸಂಗತಿಯಾಗಿದ್ದು, ಈ ಐದು ಹುಲಿಗಳು ರಸ್ತೆಯಿಂದ ಕೇವಲ 100 ಮೀಟರ್ ದೂರದಲ್ಲಿ ಸತ್ತುಬಿದ್ದಿದ್ದರೂ ಎರಡು ದಿನಗಳವರೆಗೆ ಇಲಾಖೆಯ ಸಿಬ್ಬಂದಿಯ ಗಮನಕ್ಕೆ ಬಾರದಿರುವುದು ಅರಣ್ಯ, ವನ್ಯಜೀವಿ ಸಂರಕ್ಷಣೆಯಲ್ಲಿ ಲೋಪವಾಗಿರುವುದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ ಹಾಗೂ ಸಾವಿಗೀಡಾದ ಸ್ಥಳದಿಂದ ಕೇವಲ 800 ಮೀಟರ್ ದೂರದಲ್ಲಿ ಕಳ್ಳಬೇಟೆ ನಿಗ್ರಹ ಶಿಬಿರವಿದ್ದರೂ ವನ್ಯಜೀವಿ ರಕ್ಷಣೆಯಾಗದಿರುವುದು ಹಾಗೂ ಕಳೆದ ಮೂರು ತಿಂಗಳಿನಿಂದ ಮಾದ್ಯಮಗಳಲ್ಲಿ ಮುಂಚೂಣಿಯ ಹೊರಗುತ್ತಿಗೆ ಸಿಬ್ಬಂದಿಗೆ ವೇತನ ಭತ್ಯೆ ನೀಡದೇ ಇರುವುದು ಗಸ್ತು ಕಾರ್ಯಕ್ಕೆ ಅಡಚಣೆ ಉಂಟಾಗಿರುತ್ತದೆ.

ಇದಕ್ಕೆ ಮಲೈಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹಾಗೂ ಗಸ್ತು ಸಿಬ್ಬಂದಿಯ ಕರ್ತವ್ಯ ಲೋಪವೇ ಕಾರಣವೆಂಬುದು ಮೇಲ್ನೋಟಕ್ಕೆ ಕಂಡುಬಂದಿರುವ ಕಾರಣದಿಂದ ತನಿಖೆ ನಡೆಸಬೇಕಾಗಿರುವ ಹಿನ್ನೆಲೆಯಲ್ಲಿ, ಸಂಬಂಧಿಸಿದ ಶಾಖೆಯ ಉಪ ವಲಯ ಅರಣ್ಯಾಧಿಕಾರಿ-ಕಂ-ಮೋಜಣಿದಾರ ಮತ್ತು ಗಸ್ತು ಸಿಬ್ಬಂದಿಗಳ ಸಂಬಂಧ ಕ್ರಮವನ್ನು ಪ್ರತ್ಯೇಕವಾಗಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಚಾಮರಾಜನಗರ ವೃತ್ತ, ಚಾಮರಾಜನಗರ ರವರ ಹಂತದಲ್ಲಿ ಕ್ರಮಕೈಗೊಳ್ಳಲಾಗುತ್ತಿದ್ದು, ಮಲೈಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಹನೂರು ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಹೂಗ್ಯಂ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಇವರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಕಡ್ಡಾಯ ರಜೆಯ ಮೇಲೆ ಕಳುಹಿಸಲು ನಿರ್ದೇಶಿಲಾಗಿದ್ದು, ಅದರಂತೆ ಈ ಕೆಳಕಂಡ ಆದೇಶಿಸಲಾಗಿದೆ.

ಪುಸ್ತಾವನೆಯಲ್ಲಿ’ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯ ಹಿತದೃಷ್ಟಿಯಿಂದ ಮಲೈಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗದಲ್ಲಿ ಒಂದು ತಾಯಿ ಹುಲಿ ಮತ್ತು ನಾಲ್ಕು ಮರಿಗಳು ಅಸಹಜ ಸಾವಿನ ಕುರಿತು ಸಮಗ್ರ ತನಿಖೆ ನಡೆಸಬೇಕಾಗಿರುವ ಹಿನ್ನೆಲೆಯಲ್ಲಿ ಮಲೈಮಹದೇಶ್ವರ ಬೆಟ್ಟ ವನ್ಯಜೀವಿ ಈ ಕೆಳಗಿನ ವಿಭಾಗದ ಅಧಿಕಾರಿ/ಸಿಬ್ಬಂದಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಕಡ್ಡಾಯ ರಜೆಯ ಮೇಲೆ ತೆರಳಲು ಈ ಮೂಲಕ ಆದೇಶಿಸುತ್ತಾ, ಸದರಿ ಹುದ್ದೆಗಳಿಗೆ ಈ ಕೆಳಕಂಡಂತೆ ಹೆಚ್ಚುವರಿ ಪ್ರಭಾರ ವ್ಯವಸ್ಥೆಯನ್ನು ಕಲ್ಪಿಸಿದೆ ಎಂದು ತಿಳಿಸಿದ್ದಾರೆ.

  1. ಚಕ್ರಪಾಣಿ ವೈ, ಭಾ.ಅ.ಸೇ. ಉಪ ಅರಣ್ಯ ಸಂರಕ್ಷಣಾಧಿಕಾರಿ, ಮಲೈಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗ, ಕೊಳ್ಳೇಗಾಲ,
  2. ಗಜಾನನ ಹೆಗಡೆ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಹನೂರು ವನ್ಯಜೀವಿ ಉಪ ವಿಭಾಗ (ಮಲೈಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗ
  3. ಮಾದೇಶ, ಉಪ ವಲಯ ಅರಣ್ಯಾಧಿಕಾರಿ-ಕಂ- ಮೋಜಣಿದಾರರು

ಕೆ.ಸಿ.ಎಸ್.ಆರ್. ನಿಯಮ 32 ರಡಿ ಪ್ರಸ್ತುತ ಖಾಲಿ ಇರುವ ವಲಯ ಅರಣ್ಯಾಧಿಕಾರಿ ಹೂಗ್ಯಂ ವನ್ಯಜೀವಿ ವಲಯ ಹುದ್ದೆಯ ಸ್ವತಂತ್ರ ಪುಭಾರ ಸಂಬಂಧಿಸಿದ ಹುದ್ದೆಗೆ ಹೆಚ್ಚುವರಿ ಪ್ರಭಾರ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.

ಸಂತೋಷ್ ಕುಮಾರ್ ಜಿ., ಭಾ.ಅ.ಸೇ. ಉಪ ಅರಣ್ಯ ಸಂರಕ್ಷಣಾಧಿಕಾರಿ (ಕೇಂದ್ರಸ್ಥಾನ), ಬೆಂಗಳೂರು ಇವರು ಉಪ ಅರಣ್ಯ ಸಂರಕ್ಷಣಾಧಿಕಾರಿ, ಮ ಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗ, ಕೊಳ್ಳೇಗಾಲ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ವಹಿಸಿಕೊಂಡು ಮುಂದಿನ ಆದೇಶದವರೆಗೆ ಕರ್ತವ್ಯ ನಿರ್ವಹಿಸುವುದು.

ಸ್ಕೂಲ್ ಮನೋಹರ್ ಅಹಿರ, ಭಾ.ಅ.ಸೇ. (ಪರೀಕ್ಷಾರ್ಥಿ), ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಮ ಮಹದೇಶ್ವರ ಬೆಟ್ಟ ವನ್ಯಜೀವಿ ಉಪ ವಿಭಾಗ, ಕೊಳ್ಳೇಗಾಲ ಇವರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಹನೂರು ವನ್ಯಜೀವಿ ಉಪ ವಿಭಾಗ (ಮಲೈಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗ] ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ವಹಿಸಿಕೊಂಡು ಮುಂದಿನ ಆದೇಶದವರೆಗೆ ಕರ್ತವ್ಯ ನಿರ್ವಹಿಸುವುದು.

ಉಮಾಪತಿ ಕೆ., ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ರಾ.ಅ.ಸೇ. ಪರೀಕ್ಷಾರ್ಥಿ) (ಪುಸ್ತುತ ತರಬೇತಾರ್ಥಿಯಾಗಿ | ವಲಯ ಅರಣ್ಯಾಧಿಕಾರಿ, ಹನೂರು ಬಫ‌ ವಲಯದಲ್ಲಿ ಸೂಪರ್ ನ್ಯೂಮರಿ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದು] ಇವರು ವಲಯ ಅರಣ್ಯಾಧಿಕಾರಿ, ಹೂಗ್ಯಂ ವನ್ಯಜೀವಿ ವಲಯ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ವಹಿಸಿಕೊಂಡು ಮುಂದಿನ ಆದೇಶದವರೆಗೆ ಕರ್ತವ್ಯ ನಿರ್ವಹಿಸುವುದು.

ಮಲೈಮಹದೇಶ್ವರ ಬೆಟ್ಟ, ವನ್ಯಜೀವಿ ವಿಭಾಗದಲ್ಲಿನ ಸಂಬಂಧಿಸಿದ ಶಾಖೆಯ ಉಪ ವಲಯ ಅರಣ್ಯಾಧಿಕಾರಿ-ಕಂ-ಮೋಜಣಿದಾರ ಮತ್ತು ಗಸ್ತು ಸಿಬ್ಬಂದಿಗಳ ಸಂಬಂಧ ಸೂಕ್ತ ಕ್ರಮವನ್ನು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಚಾಮರಾಜನಗರ ವೃತ್ತ, ಚಾಮರಾಜನಗರ ರವರ ಹಂತದಲ್ಲಿ ಪ್ರತ್ಯೇಕವಾಗಿ ಕ್ರಮಕೈಗೊಳ್ಳುವುದು ಎಂದು ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM1 Min Read

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM1 Min Read

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM2 Mins Read
Recent News

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM

BREAKING: ಭವಾನಿಪುರದಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಸೋಲು, ಅಧಿಕಾರದತ್ತ ಬಿಜೆಪಿ!

04/05/2026 9:43 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM
State News
KARNATAKA

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

By kannadanewsnow0904/05/2026 9:54 PM KARNATAKA 1 Min Read

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ (UDF) ಮೈತ್ರಿಕೂಟವು ಭರ್ಜರಿ ಜಯಭೇರಿ ಬಾರಿಸಿದೆ. ಈ ಚುನಾವಣಾ ಯಶಸ್ಸಿನಲ್ಲಿ ಕರ್ನಾಟಕದ ವಸತಿ…

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM

ಸಾಗರದ ಬೇಸೂರು ಅಣು ಸ್ಥಾವರಕ್ಕೆ ವಿರೋಧ: ದಾಖಲೆ ನೀಡದಿದ್ದರೆ ಕಾನೂನುಭಂಗ ಚಳವಳಿ- ತೀ.ನ.ಶ್ರೀನಿವಾಸ್ ಎಚ್ಚರಿಕೆ

04/05/2026 8:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.