ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದು, ಈ ಮೂಲಕ ಹೃದಯಾಘಾತಕ್ಕೆ ಬಲಿಯಾದವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.
ಸೋಮನಹಳ್ಳಿಯ ಸಂಜಯ್ (25) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಿನ್ನೆ ಸಂಜೆ ಎದೆನೋವು ಎಂದು ಆಸ್ಪತ್ರೆಗೆ ಹೋಗಿದ್ದರು. ಸೋಮನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ನಡೆಸಿದ್ದರು. ಈ ವೇಳೆ ಬೇರೆ ಆಸ್ಪತ್ರೆಗೆ ಹೋಗುವಾಗ ಮೃತಪಟ್ಟಿದ್ದಾರೆ.
ಮನೆಯಲ್ಲೇ ಕುಸಿದು ಬಿದ್ದು ಮಹಿಳೆ ಸಾವು!
ಹಾಸನದಲ್ಲಿ ಹೃದಯಾಘಾತದಿಂದ ಮರಣ ಮೃದಂಗ ಮುಂದುವರೆದಿದ್ದು ಕಳೆದ 40 ದಿನಗಳಲ್ಲಿ ಇದುವರೆಗೂ 21 ಜನರು ಹೃದಯಘಾತದಿಂದ ಸಾವನಪ್ಪಿದ್ದಾರೆ. ಇದೀಗ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಮಹಿಳೆ ಒಬ್ಬರು ಮನೆಯಲ್ಲಿಯೇ ಕುಸಿದು ಬಿದ್ದು ಸಾವನಪ್ಪಿದ್ದಾರೆ. ಹೌದು ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಜೆಪಿ ನಗರದ ಲೇಪಾಕ್ಷಿ (50) ಎನ್ನುವವರು ಬೆಳಿಗ್ಗೆ ಮನೆಯಲ್ಲಿದ್ದಾಗಲೇ ಸುಸ್ತು ಎಂದು ಕುಸಿದು ಬಿದಿದ್ದರು. ಲೇಪಾಕ್ಷಿ ಅವರನ್ನು ತಕ್ಷಣ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು.ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಲೇಪಾಕ್ಷಿ ಸಾವನ್ನಪ್ಪಿದ್ದಾರೆ.ಹಾಸನ ಜಿಲ್ಲೆಯಲ್ಲಿ 40 ದಿನಗಳಲ್ಲಿ ಇದುವರೆಗು 21ಜನ ಬಲಿಯಾಗಿದ್ದಾರೆ.
ಟೀ ಕುಡಿಯುತ್ತಿರುವಾಗಲೇ ಕುಸಿದು ಬಿದ್ದು ಪ್ರಾಧ್ಯಾಪಕ ಸಾವು!
ಅಲ್ಲದೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಟೀ ಕುಡಿಯುತ್ತಿರುವಾಗಲೇ ಪ್ರಾಧ್ಯಾಪಕ ಒಬ್ಬರು ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೊಳೆನರಸೀಪುರದಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ಮುತ್ತಯ್ಯ (58) ಸಾವನಪ್ಪಿದ್ದಾರೆ. ಇಂದು ಬೆಳಿಗ್ಗೆ ಕಾಲೇಜಿನ ಎದುರುಗಡೆ ಇರುವ ಕ್ಯಾಂಟೀನ್ ನಲ್ಲಿ ಟೀ ಕುಡಿಯುತ್ತಿರುವಾಗ ಏಕಾಎಕಿ ಹೃದಯಘಾತದಿಂದ ಮುತ್ತಯ್ಯ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಜಮೀನಲ್ಲಿ ಉಳುಮೆ ಮಾಡುವಾಗಲೇ ಯೋಧ ಸಾವು!
ಇನ್ನು ಹಾಸನ ಜಿಲ್ಲೆಯ ಜನರಾಯಪಟ್ಟಣದಲ್ಲಿ ಜಮೀನಿನಲ್ಲಿ ಉಳುಮೆ ಮಾಡುವಾಗಲೇ ಯೋಧ ಸಾವನ್ನಪ್ಪಿದ್ದಾನೇ. ಮೃತ ಯೋಧನನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಲೋಹಿತ್ (38) ಎಂದು ತಿಳಿದುಬಂದಿದೆ. 18 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಲೋಹಿತ್ ರಜೆಗೆಂದು ಊರಿಗೆ ತೆರಳಿದ್ದಾಗ ಜಮೀನು ಉಳುಮೆ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ಭಾನುವಾರ ಸಾವನ್ನಪ್ಪಿದ್ದಾರೆ.
ಜೂ.28ರಂದು ತಮ್ಮ ಜಮೀನಿನಲ್ಲಿ ಟ್ರ್ಯಾಕ್ಟರ್ ಮೂಲಕ ಜಮೀನನ್ನು ಉಳುಮೆ ಮಾಡುವ ವೇಳೆ ಹೃದಯಾಘಾತವಾಗಿತ್ತು. ಆಗ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿ ಹೊಡೆದ ಹಿನ್ನೆಲೆ ಲೋಹಿತ್ ಅವರಿಗೆ ಸಣ್ಣಪುಟ್ಟ ಗಾಯಗಳೂ ಆಗಿದ್ದವು. ತಕ್ಷಣ ಸ್ಥಳೀಯರು ಲೋಹಿತ್ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದ್ರೆ ದುರಾದೃಷ್ಟವಶಾತ್ ಚಿಕಿತ್ಸೆಗೆ ಸ್ಪಂದಿಸದೆ ಲೋಹಿತ್ ಸಾವನ್ನಪ್ಪಿದ್ದಾರೆ.
ಮಲಗಿದ್ದಾಗಲೇ ನಾಡಕಚೇರಿಯ ಡಿ ಗ್ರೂಪ್ ನೌಕರ ಸಾವು
ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಡಿ ಗ್ರೂಪ್ ನೌಕರರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಹೌದು ನಾಡಕಚೇರಿ ಡಿ ಗ್ರೂಪ್ ನೌಕರ ಕುಮಾರ್ (53) ಎನ್ನುವವರು ಸಾವನಪ್ಪಿದ್ದಾರೆ. ಚೆನ್ನರಾಯಪಟ್ಟಣ ತಾಲೂಕಿನ ನಲ್ಲೂರು ಗ್ರಾಮದ ನಿವಾಸಿಯಾಗಿರುವ ಅವರು ರಾತ್ರಿ ಮನೆಯಲ್ಲಿ ಮಲಗಿದ್ದಾಗ ಕುಮಾರ್ ಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಚನ್ನರಾಯಪಟ್ಟಣ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಆದರೆ ಅಷ್ಟರಲ್ಲೇ ಆಗಲಿ ಅವರು ಸಾವನ್ನಪ್ಪಿದ್ದಾರೆ.ಈ ಮೂಲಕ ಹಾಸನದಲ್ಲಿ ಇದುವರೆಗೂ ಕಳೆದ 40 ದಿನಗಳಲ್ಲಿ 22 ಜನರು ಸಾವನ್ನಪ್ಪಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವು ಪ್ರಕರಣ: ತಜ್ಞರಿಗೆ ವರದಿ ನೀಡಲು ರಾಜ್ಯ ಸರ್ಕಾರ ಆದೇಶ
ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ಈ ಘಟನೆಗಳ ಸಂಬಂಧ 10 ದಿನಗಳಲ್ಲಿ ಪರಿಶೀಲಿಸಿ ವರದಿ ನೀಡುವಂತೆ ತಜ್ಞರ ಸಮಿತಿಗರ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಸುಮಾರು 18 ಜನರು ಹೃದಯಘಾತಕ್ಕೆ ಒಳಗಾಗಿ ಸಾವನಪ್ಪಿದ್ದರರೆ ಎಂಬುದಾಗಿ ಸಮೂಹ ಮಾಧ್ಯಮಗಳಲ್ಲಿ ಮತ್ತು ದಿನಪತ್ರಿಕೆಯಲ್ಲಿ ಪ್ರಕಟಣೆಗೊಂಡಿರುತ್ತದೆ ಎಂದಿದ್ದಾರೆ.
ಸದರಿ ವಿಷಯದ ಬಗ್ಗೆ ಈಗಾಗಲೇ ಸರ್ಕಾರದಿಂದ ಸುತ್ತೋಲೆ ಸಂಖ್ಯೆ: ಆಕುಕ 66 ಸಿಜಿಎಂ 2025, ದಿ:05.05.2025ರ ಅನ್ವಯ, ನಿರ್ದೇಶಕರು, ಶ್ರೀ ಜಯದೇವ ಹೃದ್ರೋಗ ಸಂಸ್ಥೆ ಬೆಂಗಳೂರು ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಮಿತಿಯು ಸದರಿ ವಿಷಯವನ್ನು ಸಹ Hassan Institute of Medical Science ಇವರ ಸಹಯೋಗದೊಂದಿಗೆ ಪರಿಶೀಲಿಸಿ, 10 ದಿನಗಳೊಳಗಾಗಿ ವರದಿಯನ್ನು ನೀಡಲು ಸೂಚಿಸಿದ್ದಾರೆ.