ಬೆಂಗಳೂರು: ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿದ ಇನೋವಾ ಕಾರು ಪಲ್ಟಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ದೊಡ್ಡಬಳ್ಳಾಪುರದ ಮಾಕಾಳಿಯಲ್ಲಿ ನಡೆದಿದ್ದು, ಇನ್ನೋವ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ನಾಲ್ವರ ದೇಹಗಳು ನಾನಾ ಕಡೆ ಬಿದ್ದಿರುವ ಸನ್ನಿವೇಶ ಕಂಡು ಬಂದಿದೆ. ಸ್ಥಳಕ್ಕೆ ಸ್ಥಳೀಯ ಪೊಲೀಸರು ಆಗಮಿಸಿದ್ದು, ಶವಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ ಅಂತ ತಿಳಿದು ಬಂದಿದೆ.
ಉಚಿತ ಸುದ್ದಿ ಪಡೆದುಕೊಳ್ಳುವುದಕ್ಕೆ ನಮ್ಮ ವಾಟ್ಸಪ್ ಗುಂಪು ಸೇರಿಕೊಳ್ಳಿ