ಶಿವಮೊಗ್ಗ : ರಾಜ್ಯದಲ್ಲಿ ಕಳೆದ ಕೆಲವು ತಿಂಗಳಿನಿಂದ ಹೃದಯಘಾತದಿಂದ ಸಾವನಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಅದರಲ್ಲೂ ಹಾಸನ ಜಿಲ್ಲೆಯ ಒಂದರಲ್ಲಿ 40 ದಿನದಲ್ಲಿ 25 ಜನರು ಸಾವನ್ನಪ್ಪಿದ್ದರೆ ಚಿಕ್ಕಮಂಗಳೂರಿನಲ್ಲಿ ಕಳೆದ ಎರಡು ತಿಂಗಳಲ್ಲಿ 13 ಜನ ಸಾವನ್ನಪ್ಪಿದ್ದಾರೆ ಇದೀಗ ಶಿವಮೊಗ್ಗದಲ್ಲಿ ಹೃದಯಾಘಾತದಿಂದ ಸರ್ಕಾರಿ ವೈದ್ಯರು ಒಬ್ಬರು ಸಾವನಪ್ಪಿದ್ದಾರೆ.
ಹೌದು ಶಿವಮೊಗ್ಗ ಚಳಿಯಲ್ಲಿ ಹೃದಯಘಾತಕ್ಕೆ ಸರ್ಕಾರಿ ವೈದ್ಯ ಬಲಿಯಾಗಿದ್ದಾರೆ. ಹೃದಯಘಾತದಿಂದ ಸರ್ಕಾರಿ ವೈದ್ಯ ಸಂದೀಪ್ (48) ಇದೀಗ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆ ಹೊನ್ನೂರಿನಲ್ಲಿ ಈ ಒಂದು ಘಟನೆ ನಡೆದಿದೆ. ಸಂದೀಪ್ ಹೊಳೆಹೊನ್ನೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯರಾಗಿ 8 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಇದೀಗ ಹೃದಯಘಾತದಿಂದ ಸಂದೀಪ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಉಚಿತ ಸುದ್ದಿ ಪಡೆದುಕೊಳ್ಳುವುದಕ್ಕೆ ನಮ್ಮ ವಾಟ್ಸಪ್ ಗುಂಪು ಸೇರಿಕೊಳ್ಳಿ 👉