ಬೆಂಗಳೂರು : ರಾಜ್ಯ ಕಾಂಗ್ರೆಸ್ನಲ್ಲಿ ಸದ್ಯಕ್ಕೆ ಎಲ್ಲವೂ ಸರಿ ಇಲ್ಲ ಎಂಬಂತಾಗಿದೆ. ಸ್ವಪಕ್ಷದ ವಿರುದ್ಧವೇ ಶಾಸಕರು ಅಸಮಾಧಾನ ಹೊರ ಹಾಕುತ್ತಿದ್ದು, ಇದೀಗ ಶಾಸಕರ ಅಹವಾಲು ಕೇಳಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ ನಿನ್ನೆ ರಾಜ್ಯಕ್ಕೆ ಆಗಮಿಸಿದ್ದಾರೆ. ದಿಗ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಡಿಕೆ ಶಿವಕುಮಾರ್ ಸಿಎಂ ಆಗುವ ಕುರಿತು ಸುರ್ಜೆವಾಲಾ ಬಳಿ ಚರ್ಚಿಸುತ್ತೇನೆ ಎಂದು ಹೇಳಿಕೆ ನೀಡಿದರು.
ರಾಮನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲು ಡಿಕೆ ಶಿವಕುಮಾರ್ ಪ್ರಮುಖ ಪಾತ್ರ ಇದೆ. ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಅವರ ಭೇಟಿಗೆ ತೆರಳುತ್ತಿದ್ದೇನೆ. ಅವರ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಕೊಡುತ್ತೇನೆ. ಸುರ್ಜೆವಾಲಾ ಬಳಿ ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಚರ್ಚಿಸುತ್ತೇನೆ ಎಂದರು.
ನಮ್ಮ ನಾಯಕರಿಗೆ ಒಂದು ಅವಕಾಶ ಮಾಡಿಕೊಡಿ. ರಾಜ್ಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪಕ್ಷ ಸಂಘಟನೆ ಮತ್ತು ಹೋರಾಟ ಮಾಡಿದ್ದಾರೆ. ಅನೇಕ ರೂಪರೇಷ ಸಿದ್ಧಪಡಿಸಿದ ರಾಜ್ಯದಲ್ಲಿ ಕಾರ್ಯಕ್ರಮ ಮಾಡಿದ್ದಾರೆ. ಮೇಕೆದಾಟು, ಆರೋಗ್ಯ ಹಸ್ತ ಸೇರಿದಂತೆ ಹಲವು ಕಾರ್ಯಕ್ರಮ ಮಾಡಿದ್ದಾರೆ. ರಾಜ್ಯದಲ್ಲಿ ಸರ್ಕಾರ ಬರಲು ಡಿಸಿಎಂ ಡಿಕೆ ಪ್ರಮುಖ ಪಾತ್ರ ಇದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ ನೀಡಿದರು.








