ಹಾಸನ : ಹಾಸನದಲ್ಲಿ ದಿನೇ ದಿನೇ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ನಿನ್ನೆ ತಾನೆ ಹೃದಯಾಘಾಟಕ್ಕೆ ಹಾಸನ ಜಿಲ್ಲೆಯ ಒಂದರಲ್ಲಿ ಐವರು ಸಾವನಪ್ಪಿದ್ದರು. ಇದೀಗ ಹಾಸನ ಜಿಲ್ಲೆಯಲ್ಲಿ ಇಂದು ಮತ್ತೆ ಇಬ್ಬರು ಬಲಿಯಾಗಿದ್ದಾರೆ.
ಹೌದು, ಹಾಸನ ಜಿಲ್ಲೆಯಲ್ಲಿ ಇಂದು ಎರಡೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವ್ಯಕ್ತಿ ಹಾಗೂ ಒಂದುವರೆ ತಿಂಗಳ ಬಾಣಂತಿ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಒಂದೂವರೆ ತಿಂಗಳ ಬಾಣಂತಿ ಸಾವನನಪ್ಪಿದ್ದಾರೆ. ಬಾಣಂತನಕ್ಕೆ ಆಯನೂರು ಗ್ರಾಮದ ತವರು ಮನೆಯಲ್ಲಿದ್ದ ಹರ್ಷಿತಾ (22) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನದ ಕೊಮ್ಮೆನಹಳ್ಳಿಯ ಒಂದುವರೆ ತಿಂಗಳ ಬಾಣಂತಿ ಹರ್ಷಿತಾ ಇದೀಗ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆಯ ಐನೂರು ಗ್ರಾಮದಲ್ಲಿ ಹರ್ಷಿತಾ ಸಾವನ್ನಪ್ಪಿದ್ದಾರೆ.
ಬಾಣಂತಕ್ಕೆ ಹರ್ಷಿತಾ ಅವರು ಶಿವಮೊಗ್ಗ ಜಿಲ್ಲೆಯ ಆಯನೂರು ಗ್ರಾಮದ ತವರು ಮನೆಯಲ್ಲಿ ಇದ್ದರು. ಇವರು ಹಾಸನದ ಕೊಮ್ಮೇನಹಳ್ಳಿಯ ನಿವಾಸಿಯಾಗಿದ್ದು, ಹೆರಿಗೆ ಬಳಿಕ ತವರಿಗೆ ತೆರಳಿದ್ದರು. ಮೊನ್ನೆ ರಾತ್ರಿ ಹರ್ಷಿತಾಗೆ ಎದೆ ನೋವು ಕಾಣಿಸಿಕೊಂಡಿತ್ತು. ಕೊಮ್ಮೇನಹಳ್ಳಿ ಗ್ರಾಮದಿಂದ ಹರ್ಷಿತಾ ತಮ್ಮ ಪತಿಯನ್ನು ಕರೆಸಿಕೊಂಡಿದ್ದಾರೆ. ಆದರೆ ನಿನ್ನೆ ಬೆಳಗ್ಗೆ ಆಸ್ಪತ್ರೆಗೆ ಕರೆದೋಯ್ಯುವಾಗಲೇ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ.
ಇನ್ನೂ ಎರಡೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ ಸೋಮನಹಳ್ಳಿಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಸೋಮನಹಳ್ಳಿಯ ಸಂಜಯ್ (25) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಿನ್ನೆ ಸಂಜೆ ಎದೆನೋವು ಎಂದು ಆಸ್ಪತ್ರೆಗೆ ಹೋಗಿದ್ದರು. ಸೋಮನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ನಡೆಸಿದ್ದರು. ಈ ವೇಳೆ ಬೇರೆ ಆಸ್ಪತ್ರೆಗೆ ಹೋಗುವಾಗ ಮೃತಪಟ್ಟಿದ್ದಾರೆ.