ಬೆಂಗಳೂರು : ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಭೇಟಿ ನೀಡಿದ್ದು ಶಾಸಕರ ಕುಂದು ಕೊರತೆಗಳನ್ನು ಆಲಿಸಲು ರಾಜ್ಯಕ್ಕೆ ಭೇಟಿ ನೀಡಿದ್ದಾರೆ ಇದರ ಬೆನ್ನಲ್ಲೇ ಕಾಂಗ್ರೆಸ್ ಹಲವು ಶಾಸಕರು ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ಹೇಳಿಕೆ ನೀಡಿದ್ದಾರೆ ಈ ವಿಚಾರವಾಗಿ ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕರ ವಿರುದ್ಧ ಗರಂ ಆಗಿದ್ದು ರಾಜ್ಯದಲ್ಲಿ ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ರಾಜ್ಯದಲ್ಲಿ ಯಾವ ನಾಯಕತ್ವ ಕೂಡ ಬದಲಾವಣೆ ಇಲ್ಲ ಎಂದು ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈ ಬಲಪಡಿಸುತ್ತೇವೆ. ಮುಖ್ಯಮಂತ್ರಿ ಸ್ಥಾನದ ಕುರಿತು ಮಾತನಾಡಿರುವ ಶಾಸಕ ಇಕ್ಬಾಲ್ ಹುಸೇನ್ ಗೆ ನೋಟಿಸ್ ಕೊಡುತ್ತೇವೆ. ಅಲ್ಲದೇ ಶಾಸಕರಾದ ಬಿ.ಆರ್ ಪಾಟೀಲ್ ಇರಲಿ HC ಬಾಲಕೃಷ್ಣ ಯಾರೇ ಆಗಿರಲಿ ಮಾಧ್ಯಮಗಳ ಮುಂದೆ ಹೋಗಬಾರ್ದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಾರ್ನಿಂಗ್ ನೀಡಿದ್ದಾರೆ.







