ಬೆಂಗಳೂರು: ಶಾಸಕ ಇಕ್ಬಾಲ್ ಹುಸೇನ್ ಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮೂರು ತಿಂಗಳಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆಂಬ ಹೇಳಿಕೆಯ ಹಿನ್ನಲೆಯಲ್ಲಿ ಶೋಕಾಸ್ ನೋಟಿಸ್ ನೀಡಿದ್ದಾರೆ.
ರಾಮನಗರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಅವರು ಡಿಕೆ ಶಿವಕುಮಾರ್ ಅವರು ಮೂರು ತಿಂಗಳಲ್ಲಿ ಮುಖ್ಯಮಂತ್ರಿಯಾಗುತ್ತಾರೆ ಎಂಬುದಾಗಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಏಳಿಸಿತ್ತು.
ಈ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಶೋಕಾಸ್ ನೋಟಿಸ್ ಅನ್ನು ಶಾಸಕ ಇಕ್ಬಾಲ್ ಗೆ ನೀಡಿದ್ದಾರೆ. ನೋಟಿಸ್ ನಲ್ಲಿ ಇಕ್ಬಾಲ್ ಹೇಳಿಕೆಯಿಂದ ಪಕ್ಷಕ್ಕೆ ಮುಜುಗರವಾಗಿದೆ. ಅಶಿಸ್ತಿನ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಒಂದು ವಾರದಲ್ಲಿ ಸಮಜಾಯಿಸಿ ನೀಡುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ.
BREAKING: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ‘SIT ರದ್ದು’ ಮಾಡಿ ‘CBI’ಗೆ ವಹಿಸಿ ಹೈಕೋರ್ಟ್ ಆದೇಶ