ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮತ್ತೆ ಮುಂಗಾರು ಚುರುಕುಗೊಳ್ಳಲಿದ್ದು, ವಿವಿದೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದಿನಿಂದ ಉತ್ತರ ಕನ್ನಡ, ಬೆಳಗಾವಿ, ಧಾರಾವಾಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಜುಲೈ 3 ರಿಂದ ಕರಾವಳಿ ಹಾಗೂ ಉತ್ತರ ಒಳನಾಡಿನ ಮತ್ತಷ್ಟು ದಿನಗಳಿಗೆ ಮಳೆ ವ್ಯಾಪಿಸಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಧಾರವಾಡ, ಗದಗ, ಹಾವೇರಿ, ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ವಿಜಯನಗರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾಣ ಇಲಾಖೆ ತಿಳಿಸಿದೆ.