ಹಾಸನ : ಕಳೆದ 40 ದಿನಗಳಲ್ಲಿ ಹಾಸನ ಜಿಲ್ಲೆಯಲ್ಲಿ ಇದುವರೆಗೂ ಹೃದಯಾಘಾತಕ್ಕೆ ಒಟ್ಟು 25 ಜನರು ಸಾವನ್ನಪ್ಪಿದ್ದಾರೆ. ಅಲ್ಲದೆ ನಿನ್ನೆ ಒಂದೇ ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು ಆರು ಜನರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇದೀಗ ಹಾಸನದಲ್ಲಿ ಆಗುತ್ತಿರುವ ಸರಣಿ ಹೃದಯಾಘಾತ ಪ್ರಕರಣಗಳ ತನಿಖೆಗೆ ತಾಂತ್ರಿಕ ಸಮಿತಿ ರಚನೆ ಮಾಡಿದ ಸರ್ಕಾರ ತನಿಖೆಯ ಪ್ರಾಥಮಿಕ ವರದಿಯಲ್ಲಿ ಶಾಕಿಂಗ್ ಅಂಶ ಬಹಿರಂಗವಾಗಿದೆ.
ಹೌದು ಹಾಸನದಲ್ಲಿ ಹೃದಯಾಘಾತ ಸರಣಿ ಸಾವು ಪ್ರಕರಣಗಳ ಬೆನ್ನಲ್ಲೇ, ರಾಜ್ಯ ಸರ್ಕಾರ ತಾಂತ್ರಿಕ ಸಮಿತಿ ರಚಿಸಿತ್ತು. ಇದೀಗ ಸಮಿತಿಯ ಪ್ರಾಥಮಿಕ ವರದಿಯಲ್ಲಿ ಶಾಕಿಂಗ್ ಅಂಶ ಬಯಲಾಗಿದ್ದು, ಅತಿಯಾದ ಬೊಜ್ಜು, ಮಾಂಸ ಸೇವನೆ ಹಾಗು ಮದ್ಯಪಾನದಿಂದ ಸಾವು ಸಂಭವಿಸಿದೆ. ರೆಡ್ ಮೀಟ್ ಸೇವನೆಯಿಂದ ಕೊಲೆಸ್ಟ್ರಾಲ್ ಹೊಂದಿರುವ ಸಾಧ್ಯತೆ ಇದ್ದು, ಅನ್ ಕಂಟ್ರೋಲ್ಡ್ ಕೊಲೆಸ್ಟ್ರಾಲ್ ಇಂದ ಹೃದಯಾಘಾತ ಆಗುವ ಸಾಧ್ಯತೆ ಇರುತ್ತೆ ಎನ್ನಲಾಗುತ್ತಿದೆ. ಒಂದು ವಾರದೊಳಗೆ ಸರ್ಕಾರಕ್ಕೆ ತಾಂತ್ರಿಕ ಸಮ್ಮತಿ ವರದಿ ಸಲ್ಲಿಸಲಿದೆ ಎಂದು ತಿಳಿದುಬಂದಿದೆ.