ಧಾರವಾಡ : ಇತ್ತೀಚಿಗೆ ಬೆಳಗಾವಿಯಲ್ಲಿ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಕಾರ್ಯಕ್ರಮ ಆಯೋಜನೆ ಮಾಡಿತ್ತು. ಈ ಒಂದು ಕಾರ್ಯಕ್ರಮದಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ವೇದಿಕೆ ಮುಂಭಾಗ ನುಗ್ಗಿ ಗಲಾಟೆ ಮಾಡಿದ್ದರು. ಈ ವೇಳೆ ವೇದಿಕೆ ಮೇಲೆ ಇದಂತಹ ಸಿಎಂ ಸಿದ್ದರಾಮಯ್ಯ ಹೆಚ್ಚುವರಿ ಎಸ್ ಪಿ ನಾರಾಯಣ ಭರಮನಿಯವರನ್ನು ವೇದಿಕೆಗೆ ಕರೆದು ಕೈ ಮೇಲೆತ್ತಿ ಬೆದರಿಸಿದ್ದರು. ಈ ಒಂದು ಪ್ರಕರಣದಿಂದ ಇದೀಗ ಧಾರವಾಡ ಜಿಲ್ಲೆ ಹೆಚ್ಚುವರಿ ಎಸ್ಪಿ ಆಗಿರುವ ಬರಮಣಿ ಸ್ವಯಂ ನಿವೃತ್ತಿಗೆ ಮುಂದಾಗಿದ್ದಾರೆ.
ಹೌದು ಧಾರವಾಡ ಹೆಚ್ಚುವರಿ ಎಸ್ಪಿ ನಾರಾಯಣ ಭರಮನಿ ಈ ಒಂದು ಘಟನೆಯಿಂದ ಸ್ವಯಂ ನಿವೃತ್ತಿಗೆ ಮುಂದಾಗಿದ್ದಾರೆ. ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಭರಮನಿ ಅವಮಾನಕ್ಕೆ ಒಳಗಾಗಿದ್ದರು. ಬೆಳಗಾವಿಯಲ್ಲಿ ಪ್ರತಿಭಟನೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತನಾಡುವ ವೇಳೆ ಕಾರ್ಯಕ್ರಮಕ್ಕೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ನುಗ್ಗಿದ್ದರು. ಈ ವೇಳೆ ಹೆಚ್ಚು ಸಿದ್ದರಾಮಯ್ಯ ಕೈ ಮೇಲೆತ್ತಿ ಹೊಡೆಯಲು ಹೋಗಿದ್ದ ಘಟನೆ ನಡೆದಿತ್ತು. ವೇದಿಕೆಗೆ ಕರೆದು ಭರಮನಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದರು.
ಇದೇ ಕಾರಣಕ್ಕೆ ನಾರಾಯಣ ಭರಮನಿ ಸ್ವಯಂ ನಿವೃತ್ತಿ ತೆಗೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಸ್ವಯಂ ನಿವೃತ್ತಿ ಕೋರಿ ಅರ್ಜಿ ಸಲ್ಲಿಸುತ್ತಿದ್ದಂತೆ ನಾರಾಯಣ ಭರಮನಿಗೆ ಸಿಎಂ ಸಿದ್ದರಾಮಯ್ಯ ಬುಲಾವ್ ನೀಡಿದ್ದಾರೆ. ಈಗಾಗಲೇ ಎಸ್ ಪಿ ನಾರಾಯಣ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಸ್ವಯಂ ನಿವೃತ್ತಿ ಕೋರಿ ಎರಡು ಪುಟಗಳ ಪತ್ರ ಬರೆದಿದ್ದಾರೆ. ಪತ್ರದಲ್ಲಿ ನಾರಾಯಣ ಅವರು ಎಲ್ಲ ಮಾಹಿತಿಯನ್ನು ಉಲ್ಲೇಖಿಸಿದ್ದಾರೆ. ಹಾಗಾಗಿ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗು ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮನವೊಲಿಕೆಗೆ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.