ಬೆಂಗಳೂರು : ಸಾಮಾಜಿಕ ಜಾಲತಾಣಗಾಲಲ್ಲಿ ಸುಳ್ಳು ಸುದ್ದಿಗಳ ಹರಡುವಿಕೆ, ಊಹಾ ಪತ್ರಿಕೋದ್ಯಮವು ಸಮಾಜಕ್ಕೆ ಮಾರಾಕವಾಗಿದೆ. ಅಂಥವುಗಳ ನಿಯಂತ್ರಣಕ್ಕೆ ರಾಜ್ಯ ಸರಕಾರ ಕಾಯ್ದೆಯನ್ನು ರೂಪಿಸಲಿದೆ ಎಂದು ನಿನ್ನೆ ಬೆಂಗಳೂರಿನ ವಾರ್ತಾ ಇಲಾಖೆಯಲ್ಲಿ ನಡೆದ ಪತ್ರಿಕಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಎಂದು ಅರ್ಥವಲ್ಲವೇ? ಊಹಾ ಪತ್ರಿಕೋದ್ಯಮವು ಪತ್ರಿಕೋದ್ಯಮ ಮತ್ತು ಸಮಾಜ ಎರಡಕ್ಕೂ ಅಪಾಯ. ಹೀಗಾಗಿ ಪತ್ರಿಕೋದ್ಯಮವು ಇದರಿಂದ ಹೊರಗೆ ಬರಬೇಕಿದೆ. ಮಾಧ್ಯಮ ಸ್ವತಂತ್ರವಾಗಿ, ನಿರ್ಭೀತಿಯಿಂದ ಸುದ್ದಿ ಮಾಡಬೇಕು ಎನ್ನುವುದರಲ್ಲಿ ನಂಬಿಕೆ ಇಟ್ಟುಕೊಂಡಿರುವವನು ನಾನು. ಜವಾಹರಲಾಲ್ ನೆಹರೂ ಅವರೂ ಇದನ್ನೇ ನಂಬಿದ್ದರು ಮತ್ತು ಪಾಲಿಸಿದ್ದರು. ಯಾವುದೇ ಚಾನಲ್ ಗಳು ನನ್ನ ಬಗ್ಗೆ ಎಷ್ಟು ಸುಳ್ಳು ಹೇಳಿದರೂ ನಾನು ಯಾರಿಗೂ ಫೋನ್ ಮಾಡಿ ಪ್ರಶ್ನೆ ಮಾಡುವವನಲ್ಲ.
ನನ್ನ ಕಾರಿನ ಮೇಲೆ ಕಾಗೆ ಕೂತಿದ್ದನ್ನು ಚರ್ಚೆ ನಡೆಸಿ, ಮೂಢನಂಬಿಕೆ ಬಿತ್ತುವುದನ್ನು ಪತ್ರಿಕಾವೃತ್ತಿ ಎಂದು ಕರೆಯಬೇಕಾ? ಜನರನ್ನು ಮೌಡ್ಯಕ್ಕೆ ತಳ್ಳುವುದು ಪತ್ರಿಕಾ ವೃತ್ತಿಯಾ? ಈ ಬಗ್ಗೆ ನೀವೆಲ್ಲರೂ ಯೋಚಿಸಬೇಕು. ನಾನು ಇಂದು ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಮತ್ತು ಮಾಧ್ಯಮ ಸಂಜೀವಿನಿ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಪತ್ರಕರ್ತರಿಗೆ ಅನುಕೂಲ ಒದಗಿಸಿದ್ದೇನೆ. ನಮ್ಮ ಪರವಾಗಿ ಬರೆಯಲಿ ಎನ್ನುವ ಕಾರಣದಿಂದ ಇವನ್ನು ಜಾರಿ ಮಾಡಿರುವುದಲ್ಲ. ನೀವೆಲ್ಲ ಸತ್ಯ ಬರೆಯಿರಿ, ಜನರ ಪರವಾಗಿ, ಪ್ರಜಾಪ್ರಭುತ್ವದ ಪರವಾಗಿ ಇರಬೇಕು ಎಂಬುದು ನಮ್ಮ ಆಶಯ.
ಸ್ವಾತಂತ್ರ್ಯಪೂರ್ವದಲ್ಲಿ ಜನರನ್ನು ಎಚ್ಚರಿಸುವ, ಸ್ವಾತಂತ್ರ್ಯ ಹೋರಾಟದ ಪರವಾಗಿ ಪತ್ರಿಕೆಗಳು ಕೆಲಸ ಮಾಡಿದ್ದವು. ಇಂದು ಪ್ರಜಾಪ್ರಭುತ್ವದ ಉಳಿವಿಗಾಗಿ ಶ್ರಮಿಸಬೇಕು. ಸಂವಿಧಾನದ ಮೌಲ್ಯಗಳು ಮತ್ತು ಸತ್ಯವನ್ನು ಮರೆಮಾಚುವ ಕೆಲಸ ಆಗಬಾರದು. ಎಲ್ಲ ಜನರಿಗೂ ಸಮಾನ ಅವಕಾಶ ಮತ್ತು ಜಾತಿ-ವರ್ಗ ರಹಿತ ಸಮಾಜ ಸೃಷ್ಟಿಯಾಗಬೇಕು ಎನ್ನುವುದು ಸಂವಿಧಾನದ ಮೌಲ್ಯ. ಇದನ್ನು ಎತ್ತಿ ಹಿಡಿಯುವುದು ಪತ್ರಿಕಾ ವೃತ್ತಿಯ ಜವಾಬ್ದಾರಿ. ದ್ವೇಷದ, ಪ್ರೀತಿಯಿಲ್ಲದ ಸಮಾಜ ಸೃಷ್ಟಿಸುವ ಪ್ರಯತ್ನಕ್ಕೆ ಮಾಧ್ಯಮಗಳು ಬೆಂಬಲಿಸಬಾರದು. ನನ್ನ ಮಾತುಗಳನ್ನು ಕೇವಲ ಪಕ್ಷದ ಚೌಕಟ್ಟಿನಲ್ಲಿ ಮಾತ್ರ ನೋಡದೆ ಸಮಾಜ ಮುಖಿಯಾಗಿ ಕೂಡ ನೋಡಬೇಕು ಎಂದು ಮನವಿ ಮಾಡುತ್ತೇನೆ.
ಸಾಮಾಜಿಕ ಜಾಲತಾಣಗಳು ಮತ್ತಿತರ ವೇದಿಕೆಗಳ ಮೂಲಕ ನಕಲಿ ಮಾಹಿತಿ ಹರಡುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದೆ. ಸಾರ್ವಜನಿಕರನ್ನ ಹಾದಿತಪ್ಪಿಸುತ್ತಿರುವ ನಕಲಿ ಸುದ್ದಿ/ಮಾಹಿತಿಗಳನ್ನ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಅವುಗಳ ನಿಯಂತ್ರಿಣಕ್ಕಾಗಿ ಪ್ರತ್ಯೇಕ ಕಾಯ್ದೆ ರೂಪಿಸಲು ಚಿಂತನೆ ನಡೆಸುತ್ತಿದೆ.
ಸಾಮಾಜಿಕ ಜಾಲತಾಣಗಳಲ್ಲಿನ ಚಟುವಟಿಕೆಗಳ ಮೇಲೆ ನಿಗಾವಹಹಿಸಲು ಬೆಂಗಳೂರು ಪೊಲೀಸರ ಪ್ರತ್ಯೇಕ ತಂಡವನ್ನ ರಚಿಸಲಾಗಿದೆ. ತರಬೇತಿ ಪಡೆದಿರುವ 434 ಸಿಬ್ಬಂದಿಗಳು 24/7 ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ದ್ವೇಷಕ್ಕೆ ಕಾರಣವಾಗುವ ಪೋಸ್ಟ್‌ಗಳನ್ನ ಹಂಚಿಕೊಳ್ಳುವವರ ಮೇಲೆ ನಿಗಾ ವಹಿಸುತ್ತಿದ್ದಾರೆ. ಇದಲ್ಲದೇ ಬೆಂಗಳೂರಿನ ಪ್ರತೀ ಠಾಣೆಗಳಲ್ಲಿಯೂ ಪ್ರತ್ಯೇಕವಾಗಿ ಓರ್ವ ಪಿಎಸ್ಐ ನೇತೃತ್ವದ ಸೋಷಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ರಚಿಸಲಾಗಿದೆ.
ಆ ತಂಡದ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿನ ಚಟುವಟಿಕೆಗಳ ಮೇಲೆ ಕಣ್ಣಿಡಲಾಗಿದೆ.ಇದರ ನಡುವೆಯೂ ಸಹ ಸಾಮಾಜಿಕ ಮಾಧ್ಯಮಗಳ ಮೂಲಕ ನಕಲಿ ವಿಚಾರಗಳನ್ನ ಹಡುವವರ ಸಂಖ್ಯೆ ಹೆಚ್ಚಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರಗತಿ ಪರಿಶೀಲನಾ ಸಭೆಯ ಸಂದರ್ಭದಲ್ಲಿ ಪೊಲೀಸರಿಗೆ ಗೃಹ ಸಚಿವರು ಸೂಚಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಎಂದು ಅರ್ಥವಲ್ಲವೇ? ಊಹಾ ಪತ್ರಿಕೋದ್ಯಮವು ಪತ್ರಿಕೋದ್ಯಮ ಮತ್ತು ಸಮಾಜ ಎರಡಕ್ಕೂ ಅಪಾಯ. ಹೀಗಾಗಿ ಪತ್ರಿಕೋದ್ಯಮವು ಇದರಿಂದ ಹೊರಗೆ ಬರಬೇಕಿದೆ.
ಮಾಧ್ಯಮ ಸ್ವತಂತ್ರವಾಗಿ, ನಿರ್ಭೀತಿಯಿಂದ ಸುದ್ದಿ ಮಾಡಬೇಕು ಎನ್ನುವುದರಲ್ಲಿ ನಂಬಿಕೆ… pic.twitter.com/5S1Sxon13U
— Siddaramaiah (@siddaramaiah) July 1, 2025