ಬೆಂಗಳೂರು : ಇಂದು ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ವಿಶೇಷ ಸಂಪುಟ ಸಭೆ ನಡೆಯುತ್ತಿದ್ದು, ಹಾಗಾಗಿ ಸಿಎಂ ಸಿದ್ದರಾಮಯ್ಯ ಇಂದು ನಂದಿ ಗ್ರಾಮದ ಬೋಗಿ ನಂದೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮಾಧ್ಯಮಗಳಿಗೆ ಉತ್ತರಿಸಿದ ಅವರು 5 ವರ್ಷಗಳ ಕಾಲ ನಾನೆ ಸಿಎಂ ಆಗಿರುತ್ತೇನೆ ಎಂದು ಹೇಳಿಕೆ ನೀಡಿದರು.
ಈ ವಿಚಾರವಾಗಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು ಸಿದ್ದರಾಮಯ್ಯ ಐದು ವರ್ಷಗಳ ಕಾಲ ಸಿಎಂ ಆಗಿರುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ನನ್ನ ಬಳಿ ಬೇರೆ ಯಾವ ಆಯ್ಕೆ ಇದೆ? ಹೈಕಮಾಂಡ್ ಏನು ಹೇಳುತ್ತದೆ ಅದೇ ಫೈನಲ್ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಐದು ವರ್ಷ ಸಿಎಂ ಅಂತ ಒಪ್ಪಿಕೊಂಡ್ರಾ ಎಂಬ ಪ್ರಶ್ನೆ ಉದ್ಭವಿಸಿದೆ.
ಸಿದ್ದರಾಮಯ್ಯ ಸಿಎಂ ಆಗಿದ್ದಾರೆ ಆ ಕುರಿತು ಅಪಸ್ವರ ಬೇಡ ಅಪಸ್ವರ ತೆಗೆಯುವುದು ಸರಿಯಲ್ಲ. ನನ್ನಂಥ ಸಾವಿರಾರು ಜನರು ಲಕ್ಷಾಂತರ ಕಾರ್ಯಕರ್ತರು ಪಕ್ಷ ಕಟ್ಟಲು ಕಷ್ಟಪಟ್ಟಿದ್ದಾರೆ. ಅವರ ಶ್ರಮ ಇದೆ ಮೊದಲು ಕಷ್ಟಪಟ್ಟ ಅವರ ಬಗ್ಗೆ ಯೋಚಿಸೋಣ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. ಮುಂದಿನ ಚುನಾವಣೆ ಕುರಿತು ಶುದ್ಧತೆ ನಡೆಸಲು ಚರ್ಚಿಸಲಾಗಿದ್ದು ಎಲ್ಲ ನಾಯಕರಿಗೂ ಅವರವರ ಜವಾಬ್ದಾರಿ ವಹಿಸಲು ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.