ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೊಸದಾಗಿ ಎರಡು ಅಕ್ರಮಗಳನ್ನು ಸಿಬಿಐ ಅಧಿಕಾರಿಗಳು ಇದೀಗ ಮತ್ತೆರಡು ಹೊಸ ಅಕ್ರಮ ಪತ್ತೆ ಹಚ್ಚಿದ್ದಾರೆ. ರಾಜ್ಯ ಜರ್ಮನ್ ಟೆಕ್ನಿಕಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ನಿಂದ 95 ಲಕ್ಷ ಹಾಗು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಿಂದ 2.17 ಕೋಟಿ ಹಣ ವರ್ಗಾವಣೆ ಆಗಿರುವುದು ಬೆಳಕಿಗೆ ಬಂದಿದೆ.
ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ಸಿಬಿಐ ಇದೀಗ ಮತ್ತೆರಡು ಹೊಸ ಅಕ್ರಮಗಳನ್ನು ಪತ್ತೆಹಚ್ಚಿದ್ದಾರೆ. ರಾಜ್ಯ ಜರ್ಮನ್ ಟೆಕ್ನಿಕಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ನಿಂದ 95 ಲಕ್ಷ ಹಾಗು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಿಂದ 2.17 ಕೋಟಿ ಹಣ ವರ್ಗಾವಣೆ ಆಗಿರುವುದು ಬೆಳಕಿಗೆ ಬಂದಿದೆ. ವಾಲ್ಮೀಕಿ ನಿಗಮದ ಮೂಲಕ ಆರೋಪಿ ನೆಕ್ಕಂಟಿ ನಾಗರಾಜ್ ಗೆ ಹಣ ವರ್ಗಾವಣೆಯಾಗಿದೆ.
ಈ ಬಗ್ಗೆ ಸಿಬಿಐ ಎಸ್‌ಪಿಪಿ ಪ್ರಸನ್ನ ಕುಮಾರ್ ಯಥಾಸತಿ ವರದಿ ಸಲ್ಲಿಸಿದ್ದರು. ಫೋರೆನ್ಸಿಕ್ ದಾಖಲೆ ವರ್ಗಾವಣೆಗೆ ಇತರೆ ತನಿಖಾ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದ್ದು, ಸಿಐಡಿ, ಇಡಿ, ಸಿಎಫ್ಎಸ್‌ಎಲ್, ಎಸ್ ಎಫ್ ಎಸ್ ಎಲ್ ಗು ಇದೆ ವೇಳೆ ಹೈಕೋರ್ಟ್ ಸೂಚನೆ ನೀಡಿದೆ. ಅಲ್ಲದೇ ಸರಕಾರಿ ನೌಕರರು, ಖಾಸಗಿ ವ್ಯಕ್ತಿಗಳ ತನಿಖೆಗೆ ಆದೇಶ ಹೊರಡಿಸಿದೆ. ತನಿಖೆ ಮುಂದುವರಿಸಿ ಆರೋಪ ಪಟ್ಟಿ ದಾಖಲಿಸಲು ಅನುಮತಿ ನೀಡಿ ಹೈಕೋರ್ಟ್ ನ ನ್ಯಾ.ಎಂ ನಾಗಪ್ರಸನ್ನ ಅವರಿದ್ದ ಪೀಠ ಆದೇಶ ಹೊರಡಿಸಿದೆ.