ಹಾವೇರಿ : ಹಾವೇರಿಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ಒಂದು ಬೆಳಕಿಗೆ ಬಂದಿದ್ದು, ಅಪರಾಪ್ತ ಹೆಣ್ಣು ಮಕ್ಕಳನ್ನು ಕರೆತಂದು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಆಕ್ಟಿವ್ ಆಗಿದ್ದು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬ್ಯಾಗವಾದಿ ಗ್ರಾಮದಲ್ಲಿ ಈ ಒಂದು ಘಟನೆ ತಡವಾಗಿ ಬೆಳಕಿಗೆ ಬಂದಿದೆ ಮಕ್ಕಳ ಮಾರಾಟ ಮಾಡುತ್ತಿದ್ದ ಮಹಿಳೆಗೆ ಗ್ರಾಮಸ್ಥರು ಇದೀಗ ಧರ್ಮದೇಟು ನೀಡಿದ್ದಾರೆ.
ಹೌದು ಹಾವೇರಿಯಲ್ಲಿ ಮಕ್ಕಳ ಕಳ್ಳ ಸಾಗಣೆ ಗ್ಯಾಂಗ್ ಆಕ್ಟಿವ್ ಆಗಿದ್ದು, ಚಿಕ್ಕ ಚಿಕ್ಕ ಹೆಣ್ಣು ಮಕ್ಕಳನ್ನು ಮಾರಾಟ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಲಕ್ಕವ ಎಂಬ ಮಹಿಳೆಗೆ ಗ್ರಾಮಸ್ಥರು ಈಗ ಧರ್ಮದೇಟು ನೀಡಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬ್ಯಾಗವಾದಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಮೊನ್ನೆ ರಾತ್ರಿ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈಕೆ ಅಪ್ರಾಪ್ತ ಬಾಲಕಿಯರನ್ನು ಪುಸಲಾಯಿಸಿ ತಂದು ಲಕ್ಷಾಂತರ ರೂಪಾಯಿಗಳಿಗೆ ಮಾರಾಟ ಮಾಡುತ್ತಿದ್ದಳು ಎನ್ನಲಾಗಿದೆ.
ತಾನು ಕರೆತಂದ ಹೆಣ್ಣು ಮಕ್ಕಳನ್ನು ಈಕೆ ತನ್ನ ಮನೆಯ ಮಂಚದ ಕೆಳಗೆ ಅಡಗಿಸಿ ಇಟ್ಟಿದ್ದಳು. ಬಡವರು, ಅನಾಥರು ನೊಂದ ಬಾಲಕಿಯರೇ ಟಾರ್ಗೆಟ್ ಆಗಿದ್ದಾರೆ. ಲಕ್ಷಾಂತರ ರೂಪಾಯಿಗೆ ಬಾಲಕಿಯರನ್ನು ಮಾರಾಟ ಮಾಡುತ್ತಿದ್ದಳು ಎಂದು ಗ್ರಾಮಸ್ಥರು ಆರೋಪಿಸಿದ್ದು ಗ್ರಾಮಸ್ಥರು ಮನೆಗೆ ನುಗ್ಗಿದಾಗ ಮಹಿಳೆ ಪರಾರಿ ಆಗಲು ಯತ್ನಿಸಿದ್ದಾಳೆ. ಈ ವೇಳೆ ಬಾಲಕಿಯರನ್ನು ವಿಚಾರಿಸಿದಾಗ ಹಾವೇರಿ, ಹುಬ್ಬಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದ ಮಕ್ಕಳು ಎಂದು ತಿಳಿದು ಬಂದಿದೆ.