ಬೆಂಗಳೂರು : ಬೆಂಗಳೂರಿನ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ CAT ಸರ್ಕಾರಕ್ಕೆ ಚಾಟಿ ಬೀಸಿ IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರಾದ್ದುಪಡಿಸಿದೆ. ಈ ವಿಚಾರವಾಗಿ ಗೃಹ ಸಚಿವ ಜಿ.ಪರಮೇಶ್ವರ್ ಮಾತನಾಡಿ ಅಮಾನತು ಪ್ರಶ್ನಿಸಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದೇವೆ ಎಂದು ತಿಳಿಸಿದರು.
ಇಂದು ಬೆನ್ನಗಳೂರಿನ ಸದಾಶಿವ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಐಪಿಎಸ್ ಅಧಿಕಾರಿ ವಿಕಾಸ್
ಕುಮಾರ್ ಅಮಾನತು ಆದೇಶ ರದ್ದು ವಿಚಾರಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ನಾವು ಸಿಎಟಿ ಆದೇಶ ಪ್ರಶ್ನಿಸಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದರು.
ಧಾರವಾಡ ಎಸಿಪಿ ನಾರಾಯಣ ಬರಮಣ್ಣಿ ವಿಆರ್ಎಸ್ ವಿಚಾರವಾಗಿ ಮಾತನಾಡಿ, ಅವರು ಹಾಗೇನೂ ಮಾಡಲ್ಲ, ಆ ರೀತಿ ಏನೂ ಇಲ್ಲ. ಸಚಿವ ಹೆಚ್.ಕೆ. ಪಾಟೀಲ್ ಅವರ ಜೊತೆ ಮಾತನಾಡಿದ್ದೇನೆ. ಅವರಿಗೆ ಪೋಸ್ಟಿಂಗ್ ಕೊಡ್ತೇವೆ. ಮುಖ್ಯಮಂತ್ರಿಗಳು ಉದ್ದೇಶಪೂರ್ವಕವಾಗಿ ಆ ರೀತಿ ಮಾಡಲಿಲ್ಲ. ಆ ಸಂದರ್ಭದಲ್ಲಿ ಸಿಎಂ ಹಾಗೆ ನಡೆದುಕೊಂಡರು ಅಷ್ಟೇ ಎಂದರು.