ಬೆಂಗಳೂರು: ಇಂದು ನಂದಿ ಬೆಟ್ಟದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚಿಕ್ಕಬಳ್ಳಾಪುರದ ಬಾಗೇಪಲ್ಲಿ ಪಟ್ಟಣವನ್ನು ಭಾಗ್ಯನಗರವೆಂದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬೆಂಗಳೂರು ಉತ್ತರ ಜಿಲ್ಲೆಯಾಗಿ ಮರುನಾಮಕರಣಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹೆಸರು ಬದಲಾವಣೆಗೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಲಾಯಿತು. ಈ ಪ್ರಸ್ತಾವನೆಗೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಚಿವ ಸಂಪುಟವು ಅನುಮೋದನೆ ನೀಡಿದೆ.
ಬಾಗೇಪಲ್ಲಿ ಹೆಸರು ಭಾಗ್ಯನಗರ ಎಂದು ಮರುನಾಮಕರಣ ಮಾಡೋದಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದಲ್ಲದೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರು ಬದಲಾವಣೆಗೂ ಅಸ್ತು ಎಂದಿದೆ. ಬೆಂಗಳೂರು ಉತ್ತರ ಜಿಲ್ಲೆ ಎಂದು ಮರು ನಾಮಕರಣಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ.