ಬೆಂಗಳೂರು: ರಾಜ್ಯದಲ್ಲಿ ನಿರಂತರ ಕಣ್ಣಿನ ಆರೋಗ್ಯ ಒದಗಿಸುವ ಸಲುವಾಗಿ ಆಶಾಕಿರಣ ದೃಷ್ಟಿ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ. ಈ ಮೂಲಕ ಕಣ್ಣಿನ ದೃಷ್ಟಿ ದೋಷದಿಂದ ಬಳಲುತ್ತಿರುವವರಿಗೆ ರಾಜ್ಯ ಸ್ರಕಾರ ಗುಡ್ ನ್ಯೂಸ್ ನೀಡಿದೆ.
ದೃಷ್ಟಿದೋಷ ನಿವಾರಣೆಗೆ ಜಾರಿಗೆ ತಂದಿದ್ದ ‘ಆಶಾಕಿರಣ’ ಯೋಜನೆಯನ್ನು ಮರುವಿನ್ಯಾಸಗೊಳಿಸಲಾಗಿದೆ. ಶಾಶ್ವತ ಪರಿಹಾರಕ್ಕಾಗಿ ನಿರಂತರ ಕಣ್ಣಿನ ಆರೋಗ್ಯ ಸೇವೆ ಒದಗಿಸುವ ಆಶಾಕಿರಣ ದೃಷ್ಟಿ ಕೇಂದ್ರಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಾರಂಭಿಸಲಾಗುತ್ತಿದೆ.
ಎಲ್ಲ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಈಗಾಗಲೇ 393 ಆಶಾಕಿರಣ ದೃಷ್ಟಿ ಕೇಂದ್ರಗಳು ಕಣ್ಣಿನ ಆರೋಗ್ಯ ಸೇವೆ ಒದಗಿಸಲು ಸಜ್ಜಾಗಿವೆ. ಸಾರ್ವಜನಿಕರು ಕೇಂದ್ರಗಳಿಗೆ ಭೇಟಿ ನೀಡಿ ಕಣ್ಣಿನ ತಪಾಸಣೆ ನಡೆಸಿಕೊಂಡು, ದೃಷ್ಟಿ ದೋಷ ಇರುವವರು ಉಚಿತ ಕನ್ನಡಕಗಳನ್ನು ಪಡೆಯಬಹುದು.
ದೃಷ್ಟಿದೋಷ ನಿವಾರಣೆಗೆ ಜಾರಿಗೆ ತಂದಿದ್ದ 'ಆಶಾಕಿರಣ' ಯೋಜನೆಯನ್ನು ಮರುವಿನ್ಯಾಸಗೊಳಿಸಲಾಗಿದೆ. ಶಾಶ್ವತ ಪರಿಹಾರಕ್ಕಾಗಿ ನಿರಂತರ ಕಣ್ಣಿನ ಆರೋಗ್ಯ ಸೇವೆ ಒದಗಿಸುವ ಆಶಾಕಿರಣ ದೃಷ್ಟಿ ಕೇಂದ್ರಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಾರಂಭಿಸಲಾಗುತ್ತಿದೆ.
ಎಲ್ಲ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ… pic.twitter.com/dy3p0u6u7n
— DIPR Karnataka (@KarnatakaVarthe) July 2, 2025