ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ನಾಳೆಯೂ ಮಳೆಯಾಗು ಮುನ್ಸೂಚನೆಯಿದೆ. ಈ ಹಿನ್ನಲೆಯಲ್ಲಿ ನಾಳೆ ಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ಡಿಸಿ ಆದೇಶಿಸಿದ್ದಾರೆ.
ಈ ಸಂಬಂಧ ಜಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಸತತ ಮಳೆಯಾಗುತ್ತಿದೆ. ಹೀಗಾಗಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಠಿಯಿಂದ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ಹಾಗೂ ಚಿಕ್ಕಮಗಳೂರು ತಾಲ್ಲೂಕಿನ ಜಾಗರ, ಖಾಂಡ್ಯ, ಅಲ್ದೂರು, ವಸ್ತಾರೆ ಹೋಬಳಿಯ ಶಾಲೆಗಳಿಗೆ ರಜೆ ನೀಡಲಾಗಿದೆ.
ನಾಳೆ ಈ ಐದು ತಾಲ್ಲೂಕಿನ ಶಿಶುಪಾಲನ ಕೇಂದ್ರ, ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ರಜೆ ಅವಧಿಯ ತರಗತಿಗಳನ್ನು ಮುಂದಿನ ಶಾಲಾ ಅವಧಿಯಲ್ಲಿ ಸರಿದೂಗಿಸುವಂತೆ ಸೂಚಿಸಿದ್ದಾರೆ.
ಚಿತ್ರದುರ್ಗ: ವಚನ ಸಾಹಿತ್ಯ ಸಂಶೋಧನೆಗೆ ಜೀವನ ಮುಡುಪಿಟ್ಟವರು ಡಾ.ಫ.ಗು.ಹಳಕಟ್ಟಿ- ಡಾ.ಎನ್ ಮಮತಾ