ಕೋಲಾರ : ಕೋಲಾರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ರುಂಡ ಕಟ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೋಲಾರದ ಮಾಲೂರಿನಭಾವನಹಳ್ಳಿ ರಸ್ತೆಯ ಪುರ ಗೇಟ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಗರ್ಭಿಣಿ ಅರ್ಚನಾ ಅವರನ್ನು ಅವರ ಮಾವ ನಾರಾಯಣಸ್ವಾಮಿ ಅವರ ಗ್ರಾಮ ಕೊರಚನೂರಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಎದುರಿಗೆ ಲಾರಿ ತಪ್ಪಿಸಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಅರ್ಚನಾ ದೇಹದಿಂದ ರುಂಡ ಹಾಗೂ ಎಡಗೈ ಭಾಗ ಪ್ರತ್ಯೇಕವಾಗಿದೆ.ಪರಿಣಾಮ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.