ಕಲಬುರ್ಗಿ : ಕಳೆದ ಒಂದುವರೆ ತಿಂಗಳಿನಿಂದ ಹಾಸನ ಜಿಲ್ಲೆ ಒಂದರಲ್ಲಿ ಹೃದಯಘಾತಕ್ಕೆ 27 ಜನರು ಸಾವನ್ನಪ್ಪಿದ್ದಾರೆ ಕ್ರಮೇಣ ರಾಜ್ಯದಲ್ಲಿ ಹೃದಯಾಘಾತದಿಂದ ಸಾವನಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಹಾಸನ ಜಿಲ್ಲೆ ಅಷ್ಟೇ ಅಲ್ಲದೆ ಕಲ್ಬುರ್ಗಿ ಮತ್ತು ಯಾದಗಿರಿಯಲ್ಲೂ ಇಬ್ಬರು ಹೃದಯಘಾತಕ್ಕೆ ಬಲಿಯಾಗಿದ್ದಾರೆ.
ಹೌದು ಕಲ್ಬುರ್ಗಿ ಜಿಲ್ಲೆಯಲ್ಲಿ ಹೃದಯಘಾತಕ್ಕೆ ರೈತರೊಬ್ಬರು ಬಲಿಯಾಗಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತದಿಂದ ರೈತ ಸಾವನಪ್ಪಿದ್ದಾರೆ. ಆಳಂದ್ ತಾಲೂಕಿನ ಲಿಂಗನವಾಡಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಸಂತೋಷ್ ಇಂಡಿ (35) ಸಾವನ್ನಪ್ಪಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುವಾಗ ಸಂತೋಷ್ ಕುಸಿದು ಬಿದ್ದಿದ್ದಾರೆ.
ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಸಂತೋಷ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಹೋದಾಗ ವೈದ್ಯರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಇನ್ನು ಯಾದಗಿರಿ ಜಿಲ್ಲೆಯಲ್ಲಿ ಹೃದಯಘಾತಕ್ಕೆ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾನೆ. ಕೆಂಭಾವಿ ನಿವಾಸಿ ತಮ್ಮಣ್ಣ (50) ಇಂದು ಹೃದಯಘಾತದಿಂದ ಸಾವನ್ನಪ್ಪಿದ್ದಾರೆ.