ಬೆಂಗಳೂರು : ಹಣಕಾಸಿನ ವಿಚಾರಕ್ಕೆ ಸಂಬಂಧಿಗಳ ಮಧ್ಯೆ ಕಿರಿಕ್ , ಕಿಡಿಗೇಡಿಯೊಬ್ಬ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿದೆ.
ಜುಲೈ 1 ರಂದು ಸಂಜೆ ಈ ಘಟನೆ ನಡೆದಿದ್ದು, ಬೆಂಗಳೂರಿನ ವಿವೇಕನಗರದಲ್ಲಿ ಸುಬ್ರಹ್ಮಣಿ ಎಂಬಾತ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ್ದಾನೆ. ಮನೆಗೆ ಬೆಂಕಿ ಹಚ್ಚುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.