ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ಕುರಿತಂತೆ ಎಫ್ ಐಆರ್ ಪ್ರಶ್ನಿಸಿ ಬಿಜೆಪಿ ಎಂಎಲ್ ಸಿ ರವಿಕುಮಾರ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಹೌದು ಎಫ್ಐಆರ್ ಪ್ರಶ್ನಿಸಿ ಹೈಕೋರ್ಟಿಗೆ ಎಂಎಲ್ಸಿ ರವಿಕುಮಾರ್ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೇ ತುರ್ತು ವಿಚಾರಣೆಗೆ ವಕೀಲ ಸುಯೋಗ ಹೇರಳೆ ಹೈಕೋರ್ಟಿಗೆ ಮನವಿ ಮಾಡಿದ್ದಾರೆ. ಈ ವೇಳೆ ಮಧ್ಯಾಹ್ನ 2:30ರ ನಂತರ ವಿಚಾರ ನಡೆಸಲು ಹೈಕೋರ್ಟ್ ಒಪ್ಪಿಗೆ ನೀಡಿದೆ. ಶಾಲಿನಿ ರಜನೀಶ್ ಅವರ ಕುರಿತು ರವಿಕುಮಾರ್ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನಲೆಯಲ್ಲಿ ಇಂದು ಎಫ್ಐಆರ್ ದಾಖಲಾಗಿತ್ತು. ಹಾಗಾಗಿ ಇದೀಗ ರವಿಕುಮಾರ್ ಅದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
FIR ದಾಖಲು
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪರಿಷತ್ ಸದಸ್ಯ ರವಿಕುಮಾರ್ ವಿರುದ್ಧ ವಿಧಾನಸೌದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಜೆಪಿನಗರದ ನಂದಾದೀಪಾ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ಅವರು ವಿಧಾನಸೌಧ ಠಾಣೆಗೆ ದೂರು ನೀಡಿದ್ದು, ದೂರಿನ ಹಿನ್ನೆಲೆಯಲ್ಲಿ ಬಿಎನ್‌ಎಸ್ ಸೆಕ್ಷನ್ 351(3)(ಅನೈತಿಕತೆಯ ಆರೋಪ), 75(3) (ಅಶ್ಲೀಲ ಹೇಳಿಕೆ), 79(ಮಹಿಳೆಯ ಮಾನಕ್ಕೆ ಕುಂದು ತರುವ ಉದ್ದೇಶದಿಂದ ಪ್ರಯೋಗಿಸಲಾದ ಪದ) ಅಡಿ ರವಿ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.