ಬೆಂಗಳೂರು : ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಕುರಿತು ಬಿಜೆಪಿ ಎಂಎಲ್ಸಿ ರವಿಕುಮಾರ್ ಆಕ್ಷೇಪಾರ್ಹ ಹೇಳಿಕೆ ವಿಚಾರವಾಗಿ ಬಿಜೆಪಿ ಎಂಎಲ್ಸಿ ರವಿಕುಮಾರ್ ಗೆ ನಾಲಿಗೆ ಉದ್ದವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಎಂಎಲ್ಸಿ ರವಿಕುಮಾರ್ ಅವರಿಗೆ ನಾಲಿಗೆ ಉದ್ದವಾಗಿದೆ ಎಂದಷ್ಟೇ ಹೇಳಿದರು. ಇನ್ನು ಇದೇ ವಿಚಾರವಾಗಿ ಕಾಂಗ್ರೆಸ್ ನಾಯಕರಾದ ಪ್ರಿಯಾಂಕ್ ಖರ್ಗೆ, ಈಶ್ವರ್ ಖಂಡ್ರೆ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಎನ್ ರವಿ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರದೀಪ್ ಈಶ್ವರ್ ಎನ್ ರವಿಕುಮಾರ್ ಗೆ ನಾಯಿಗೆ ಬಂದಿರೋ ಕಾಯಿಲೆ ಬಂದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.