ಬೆಂಗಳೂರು : ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಕುರಿತಂತೆ ಬಿಜೆಪಿ ಎಂಎಲ್ಸಿ ರವಿಕುಮಾರ್ ಅವಹೇಳನಕಾರಿ ಪದ ಬಳಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್ ಅವರಿಗೆ ಬಂಧನದ ಭೀತಿ ಎದುರಾಗಿದ್ದು ಈ ಹಿನ್ನೆಲೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ಹೌದು ಈ ಒಂದು ಹೇಳಿಕೆಯಿಂದ ಎಂಎಲ್ಸಿ ರವಿಕುಮಾರ್ ಅವರಿಗೆ ಬಂಧನದ ಭೀತಿ ಎದುರಾಗಿದ್ದು, ಹಾಗಾಗಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಪರ ವಕೀಲರಾದಂತಹ ವಕೀಲ ಸುಯೋಗ ಹೇರಳೆ ಮೂಲಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಇಂದು ಅರ್ಜಿ ಸಲ್ಲಿಸಿದ್ದಾರೆ.
ಜನರ ಪ್ರತಿಭಟನೆ ಮೂಲಕ ನಡೆಸಿ ಮನವಿ ಸಲ್ಲಿಕೆಗೆ ಮುಂದಾಗಿದ್ದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಈ ವೇಳೆ ಲಭ್ಯ ಇರಲಿಲ್ಲ. ಸರ್ಕಾರಿ ಕೆಲಸದಲ್ಲಿ ಸದಾ ಬಿಸಿಯಾಗಿರುತ್ತಾರೆ. ಈ ಅರ್ಥದಲ್ಲಿ ರವಿಕುಮಾರ್ ಹೇಳಿಕೆ ನೀಡಿದ್ದಾರೆ. ಆದರೂ ಎಫ್ಐಆರ್ ದಾಖಲಿಸಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.