ಬೆಂಗಳೂರು : ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂದು ತಮಿಳು ಖ್ಯಾತ ನಟ ಕಮಲ್ ಹಾಸನ ಈ ಹೇಳಿಕೆ ನೀಡಿ ಭಾರಿ ವಿವಾದಕ್ಕೆ ಗುರಿಯಾಗಿದ್ದರು. ಇದೀಗ ಕನ್ನಡದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡದಂತೆ ನಟ ಕಮಲ್ ಹಾಸನ್‌ಗೆ ನಿರ್ದೇಶಿಸಿ ಬೆಂಗಳೂರು ಸಿಟಿ ಸಿವಿಲ್ ನ್ಯಾಯಾ ಲಯ ನಿರ್ಬಂಧಾಜ್ಞೆ ಹೊರಡಿಸಿದೆ.
ಹೌದು ನಟ ಕಮಲ್ ಹಾಸನ್ ಅವರಿಗೆ ನಿರ್ಬಂಧ ಕೋರಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಸಲ್ಲಿಸಿರುವ ದಾವೆಯ ವಿಚಾರಣೆ ನಡೆಸಿದ ನಗರದ 31ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾ ಲಯ ಏಕಪಕ್ಷೀಯ ಆದೇಶ ಹೊರಡಿಸಿದೆ. ಕನ್ನಡ ಭಾಷೆಯ ಮೇಲೆ ಭಾಷಾಶಾಸ್ತ್ರಜ್ಞರ ಶ್ರೇಷ್ಠತೆ ಪ್ರತಿಪಾದಿಸುವ ಯಾವುದೇ ಹೇಳಿಕೆ ಅಥವಾ ಟೀಕೆಗಳನ್ನು ಪೋಸ್ಟ್ ಮಾಡುವುದು, ನೀಡುವುದು, ಬರೆಯುವುದು, ಪ್ರಕಟಿಸುವುದು ಅಥವಾ ವಿತರಿಸುವುದನ್ನು ನಿರ್ಬಂಧಿಸ ಲಾಗಿದೆ.
ಕಮಲ್ ಹಾಸನ್ ಅಥವಾ ಅವ ಮೂಲಕ ಕಾರ್ಯನಿರ್ವಹಿಸುವ ಯಾವುದೇ ವ್ಯಕ್ತಿಗಳಿಗೆ ಅನ್ವಯವಾಗುತ್ತದೆ ಎಂದಿದೆ. ಅಲ್ಲದೆ, ದಾವೆ ಸಂಬಂಧ ಕಮಲ್ ಹಾಸನ್‌ಗೆ ಸಮನ್ಸ್ ಜಾರಿಗೊಳಿಸಿರುವ ನ್ಯಾಯಾಲಯ ವಿಚಾರಣೆಯನ್ನು ಆ.30ಕ್ಕೆ ಮುಂದೂಡಿದೆ. ಈ ಹಿನ್ನೆಲೆಯಲ್ಲಿ ಈ ಹಿಂದೆ ಕರ್ನಾಟಕದಲ್ಲಿ ಅವರ ನಟನೆಯ ಥಗ್ ಲೈಫ್ ಸಿನಿಮಾಗು ಅಡ್ಡಿಯಾಗಿತ್ತು. ಇದೀಗ ನಿರ್ಭಂಧ ವಿಧಿಸಿ ಕೋರ್ಟ್ ಆದೇಶ ನೀಡಿದೆ.