ಚಿತ್ರದುರ್ಗ : ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು ಬೈಕಗೆ ಖಾಸಗಿ ಬಸ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಮದಕರಿಪುರ ಬಳಿ ಒಂದು ಅಪಘಾತ ಸಂಭವಿಸಿದೆ.
ಮೃತ ಬೈಕ್ ಸವಾರನನ್ನು ಬಚ್ಚಬೋರನಹಟ್ಟಿ ಗ್ರಾಮದ ರಮೇಶ್ (35) ಎನ್ನುವವರು ಸಾವನ್ನಪ್ಪಿದ್ದಾರೆ. ಬೈಕ್ ಗೆ ಡಿಕ್ಕಿಯಾಗಿ ಖಾಸಗಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಒಂದು ಖಾಸಗಿ ಬಸ್ ಹೊಸಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿತ್ತು ಅಪಘಾತ ಕುರಿತಂತೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.