ಚಿಕ್ಕಮಗಳೂರು : ರಾಜ್ಯದಲ್ಲಿ ಹೃದಯಾಘಾತದಿಂದ ಸರಣಿ ಸಾವುಗಳು ಸಂಭವಿಸುತ್ತಿದ್ದು ಹಾಸನ ಜಿಲ್ಲೆಯೊಂದರಲ್ಲಿ ಕಳೆದ 45 ದಿನಗಳಲ್ಲಿ ಇದುವರೆಗೂ 35 ಜನರು ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಇದೀಗ ಚಿಕ್ಕಮಂಗಳೂರಿನಲ್ಲಿ ಊಟ ಮಾಡುವಾಗ ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದು ಲಾರಿ ಚಾಲರೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ.
ಹೌದು ಅಜ್ಜಂಪುರ ಪಟ್ಟಣದ ಲಾರಿ ಚಾಲಕ ಸಗೀರ್ ಅಹ್ಮದ್ (45) ಇದೀಗ ಸಾವನ್ನಪ್ಪಿದ್ದಾರೆ ಊಟ ಮಾಡುವಾಗಲೇ ಏಕಾಎಕಿ ಎದೆನೋವು ಕಾಣಿಸಿಕೊಂಡಿದೆ. ಎದೆನೋವು ಕಾಣಿಸಿಕೊಂಡು ಅಹಮದ್ ಕುಸಿದು ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ನಿನ್ನೆ ಸಹ ಚಿಕ್ಕಮಗಳೂರಿನಲ್ಲಿ ಹೃದಯಾಘಾತಕ್ಕೆ ಓರ್ವ ವ್ಯಕ್ತಿ ಬಲಿಯಾಗಿದ್ದರು.