Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕಾಲೇಜು ಗೋಡೆಗೆ ವೇಗವಾಗಿ ಚಲಿಸುತ್ತಿದ್ದ SUV ಕಾರು ಡಿಕ್ಕಿ, ವರ ಸೇರಿ 8 ಮಂದಿ ಸಾವು | Accident

05/07/2025 11:10 AM

BREAKING : ಕೊಡವ ಸಮುದಾಯದಿಂದ ಇಂಡಸ್ಟ್ರಿಗೆ ಬಂದ ಮೊದಲ ನಟಿ ನಾನೇ : ನಟಿ ರಶ್ಮಿಕಾ ಮಂದಣ್ಣ ವಿವಾದ | WATCH VIDEO

05/07/2025 11:07 AM

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ರಾಜ್ಯಾದ್ಯಂತ ಏಕಕಾಲಕ್ಕೆ 393 ಆಶಾಕಿರಣ ದೃಷ್ಟಿಕೇಂದ್ರಗಳು ಆರಂಭ.!

05/07/2025 11:06 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ರಾಜ್ಯಾದ್ಯಂತ ಏಕಕಾಲಕ್ಕೆ 393 ಆಶಾಕಿರಣ ದೃಷ್ಟಿಕೇಂದ್ರಗಳು ಆರಂಭ.!
KARNATAKA

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ರಾಜ್ಯಾದ್ಯಂತ ಏಕಕಾಲಕ್ಕೆ 393 ಆಶಾಕಿರಣ ದೃಷ್ಟಿಕೇಂದ್ರಗಳು ಆರಂಭ.!

By kannadanewsnow5705/07/2025 11:06 AM

ಬೆಂಗಳೂರು : ಆಶಾಕಿರಣ ಯೋಜನೆಯನ್ನು ಮರುವಿನ್ಯಾಸಗೊಳಿಸಿ, ನಿರಂತರ ಕಣ್ಣಿನ ಆರೋಗ್ಯ ಸೇವೆ ಒದಗಿಸಲು ರಾಜ್ಯಾದ್ಯಂತ 393 ಆಶಾಕಿರಣ ದೃಷ್ಟಿ ಕೇಂದ್ರಗಳನ್ನು ತೆರೆಯಲಾಗಿದೆ. ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ದೃಷ್ಟಿ ಕೇಂದ್ರಗಳು ಕಾರ್ಯನಿರ್ವಹಿಸಲಿವೆ. ದೃಷ್ಟಿದೋಷ ಹೊಂದಿರುವವರು ತಪಾಸಣೆ ಮಾಡಿಸಿಕೊಂಡು ಉಚಿತವಾಗಿ ಕನ್ನಡಕಗಳನ್ನು ಪಡೆಯಬಹುದಾಗಿದ್ದು, ಅಗತ್ಯ ಇರುವವರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯನ್ನೂ ಉಚಿತವಾಗಿ ಮಾಡಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದ ಬಿಬಿಎಂಪಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದೃಷ್ಟಿ ಕೇಂದ್ರ ಉದ್ಘಾಟಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ರಾಜ್ಯದ 393 ಆಶಾಕಿರಣ ದೃಷ್ಟಿ ಕೇಂದ್ರಗಳಿಗೆ ಏಕಕಾಲಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಶಾಕಿರಣ ಯೋಜನೆಯನ್ನು ಮರುವಿನ್ಯಾಸಗೊಳಿಸಿದ್ದು, ನಿರಂತರವಾಗಿ ಕಣ್ಣಿನ ಆರೋಗ್ಯ ಸೇವೆ ಒದಗಿಸುವತ್ತ 393 ಶಾಶ್ವತ ಆಶಾಕಿರಣ ದೃಷ್ಟಿ ಕೇಂದ್ರಗಳನ್ನ ತೆರೆಯಲಾಗಿದೆ. ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆ ಸೇರಿದಂತೆ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ದೃಷ್ಟಿ ಕೇಂದ್ರಗಳನ್ನು ತೆರೆಯಲಾಗಿದ್ದು, ದೃಷ್ಟಿದೋಷ ಹೊಂದಿದವರು ತಪಾಸಣೆ ಮಾಡಿಸಿಕೊಂಡು, ಉಚಿತವಾಗಿ ಕನ್ನಡಕಗಳನ್ನ ಪಡೆಯಬಹುದಾಗಿದೆ. ಅಲ್ಲದೇ ಕಣ್ಣಿನ ಪೊರೆ ಶಸ್ತ್ರಚುಕಿತ್ಸೆಯನ್ನ ಉಚಿತವಾಗಿ ಕಲ್ಪಿಸಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಕಣ್ಣಿನ ಆರೈಕೆಗೆ ರಾಜ್ಯ ಸರ್ಕಾರ ಜಾರಿಗೆ ತಂದ ಆಶಾಕಿರಣ ಒಂದು ಮಾದರಿ ಯೋಜನೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘನೆ ವ್ಯಕ್ತಪಡಿಸಿದೆ. ಯೋಜನೆಯನ್ನ ಅಧ್ಯಯನ ಮಾಡಲು ವಿಶ್ವ ಆರೋಗ್ಯ ಸಂಸ್ಥೆ ಕರ್ನಾಟಕಕ್ಕೆ ತಂಡ ಕಳುಸುತ್ತಿರುವುದು ಅತ್ಯಂತ ಹೆಮ್ಮೆಯ ಸಂಗತಿ. ಬೆಂಗಳೂರಿಗೆ ಪ್ರತ್ಯೇಕ ಆರೋಗ್ಯ ನೀತಿಯ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ತಜ್ಞರ ತಂಡ ವರದಿ ಸಿದ್ಧಪಡಿಸುತ್ತಿದ್ದು, ಬೆಂಗಳೂರಿಗೆ ಪ್ರತ್ಯೇಕ ಆರೋಗ್ಯ ನೀತಿಯನ್ನು ಶೀಘ್ರದಲ್ಲಿಯೇ ಜಾರಿಗೆ ತರುವುದಾಗಿ ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ನೂತನ ದೃಷ್ಟಿ ಕೇಂದ್ರಗಳಿಗೆ ಚಾಲನೆ ನೀಡಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಆಶಾಕಿರಣ ಯೋಜನೆ ನಮ್ಮ ಸರ್ಕಾರದ ದೃಷ್ಟಿ ಗ್ಯಾರಂಟಿ ಯೋಜನೆ ಎಂದು ವಿಶ್ಲೇಷಿಸಿದರು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆಯಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಕಣ್ಣಿನ ಆರೈಕೆಯಲ್ಲಿ ಇಂದು ಶಾಶ್ವತ ದೃಷ್ಟಿ ಕೇಂದ್ರಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ತೆರೆಯಲಾಗಿದೆ. ನಾನು ಕೂಡ ಇಂದು ದೃಷ್ಟಿ ಕೇಂದ್ರದಲ್ಲಿ ಕಣ್ಣಿನ ತಪಾಸಣೆ ನಡೆಸಿಕೊಂಡಿದ್ದೇನೆ. ಉತ್ತಮ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯುವಂತೆ ಡಿಸಿಎಂ ಡಿಕೆ ಶಿವಕುಮಾರ್ ರಾಜ್ಯದ ಜನರಿಗೆ ಕರೆ ನೀಡಿದರು.‌

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ (ಬಿಬಿಎಂಪಿ) 11 ಆಶಾಕಿರಣ ದೃಷ್ಟಿ ಕೇಂದ್ರಗಳಲ್ಲಿ 5 ಕೇಂದ್ರಗಳು Sight Savers India ರವರ ಸಿಎಸ್‌ಆರ್ ಸಹಭಾಗಿತ್ವದಲ್ಲಿ ಮಾನವ ಸಂಪನ್ಮೂಲ, ಉಪಕರಣಗಳು ಹಾಗೂ ಕನ್ನಡಕಗ ವಿತರಣೆಗಳ ಸೇವೆಗಳನ್ನು ಒದಗಿಸಲು ವ್ಯವಸ್ಥೆ ಮಾಡಲಾಗಿದೆ.

OneSight Essilor Luxottica Foundation ಸೇರಿದಂತೆ ಒಟ್ಟು 13 ಅಶಾಕಿರಣ ದೃಷ್ಟಿ ಕೇಂದ್ರಗಳು ವಿವಿಧ ಸಿಎಸ್‌ಆರ್ ಪಾಲುದಾರರ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗಿದೆ.

ಆಶಾಕಿರಣ ಕಾರ್ಯಕ್ರಮದ ಎರಡು ಹಂತಗಳಲ್ಲಿ 8 ಜಿಲ್ಲೆಗಳಲ್ಲಿ ಒಟ್ಟು 1.40 ಕೋಟಿ ಜನರು ಪ್ರಾಥಮಿಕ ನೇತ್ರ ತಪಾಸಣೆ ಒಳಗಾಗಿದ್ದು, ಇವರಲ್ಲಿ 24.50 ಲಕ್ಷ ಜನರಿಗೆ ಹೆಚ್ಚಿನ ನೇತ್ರ ತಪಾಸಣೆಗೆ ಸಂಬಂಧಿಸಿದಂತೆ ತೊಂದರೆಗಳಿರುವುದು ಪತ್ತೆಯಾಗಿ, ಇವರನ್ನು ದ್ವಿತೀಯ ಹಂತದ ನೇತ್ರ ತಪಾಸಣೆಗೆ ಒಳಪಡಿಸಲಾಗಿರುತ್ತದೆ. 4.3 ಲಕ್ಷ ಜನರಿಗೆ ಉಚಿತ ಕನ್ನಡಕ ವಿತರಿಸಲಾಗಿದ್ದು ಉಳಿದ ಕನ್ನಡಕಗಳನ್ನು ಆಶಾಕಿರಣ ದೃಷ್ಟಿ ಕೇಂದ್ರಗಳಲ್ಲಿ ಇರಿಸಲಾಗಿದೆ. ಹಾಗು ಒಟ್ಟು 1.05 ಲಕ್ಷ ಜನರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ..

May be an image of 4 people and text that says "ធ wole ಶಾಕಿರಣ ದృಷ్ಟಿ ಕೇಂದ್ರಿ ಆಜ್ಜಾರಸపರಾರರಂಗುವ ర్ీಿ ឥរគួល ಆರೈಕೆ ರಾಜ್ಯಾದ್ಯಂತ ಏಕಕಾಲಕ್ಕೆ 393 ಆಶಾಕಿರಣ ದೃಷ್ನಿಕೇಂದ್ರಗಳು ಆರಂಭ "ಆಕಾಕಿರಣ ಯೋಜನೆಯನ್ನು ಮರುವಿನ್ಯಾಸಗೊಳಿಸಿ, ನಿರಂತರ ថងម្ជំក ಆರೋಗ್ಯ ಸೇವೆ ಒದಗಿಸಲು ರಾಜ್ಯಾದ್ಯಂತ 393 ಆಶಾಕಿರಣ ದೃಡ್ನಿ ಕೇಂದ್ರಗಳನ್ನು ತೆರೆಯಲಾಗಿದೆ. ರಾಜ್ಯದ ಎಲ್ಲ ಜಿಲ್ಲಾಸುತ್ರಗಳು, ತಾಲೂಕು ಆಸತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ದೃಡ್ಟಿ ಕೇಂದ್ರಗಳು ಕಾರ್ಯನಿರ್ವಹಿಸಲಿವೆ. ದೃಷ್ಮಿದೋಷ ಹೊಂದಿರುವವರು ತಪಾಸಣೆ ಮಾಡಿಸಿಕೊಂಡು ಉಚಿತವಾಗಿ ಕನ್ನಡಕಗಳನ್ನು ಪಡೆಯಬಹುದಾಗಿದ್ದು, ಅಗತ್ಯ ಇರುವವರಿಗೆ ថមជិក ಪೊರೆ ಶಸ್ತಚಿಕಿತ್ತೆಯನ್ನೂ ಉಚಿತವಾಗಿ ಮಾಡಲಾಗುವುದು." ದಿನೇಶ್ ಗುಂಡೂರಾವ್, ಆರೋಗ್ಯ ಸಚಿವರು ಕರ್ನಾ ಟಕದ ನವ ನಿರ್ಮಾಣಕ್ಕೆ ,ಗ್ಯಾರಂಟಿ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ DEPARTMENT INFORMATION AND PUBLIC RELATION 日® @KarmatakaVarthe f/KarnarakaWarthe"
Another good news for the people of the state: 393 Ashakirana Vision Centers opened simultaneously across the state!
Share. Facebook Twitter LinkedIn WhatsApp Email

Related Posts

BREAKING : ಕೊಡವ ಸಮುದಾಯದಿಂದ ಇಂಡಸ್ಟ್ರಿಗೆ ಬಂದ ಮೊದಲ ನಟಿ ನಾನೇ : ನಟಿ ರಶ್ಮಿಕಾ ಮಂದಣ್ಣ ವಿವಾದ | WATCH VIDEO

05/07/2025 11:07 AM1 Min Read

BIG NEWS : ರಾಜ್ಯದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಡತ ನಿರ್ವಹಣೆಗೆ `ಡಿಜಿಟಲ್ ವ್ಯವಸ್ಥೆ’ ಜಾರಿ

05/07/2025 11:02 AM1 Min Read

BREAKING : ದೇಶದ 2ನೇ ಅತೀ ಉದ್ದದ ಸಿಗಂದೂರು ಸೇತುವೆ ಜು.14ರಂದು ಲೋಕಾರ್ಪಣೆ : ಸಂಸದ ಬಿವೈ ರಾಘವೇಂದ್ರ

05/07/2025 10:50 AM1 Min Read
Recent News

BREAKING: ಕಾಲೇಜು ಗೋಡೆಗೆ ವೇಗವಾಗಿ ಚಲಿಸುತ್ತಿದ್ದ SUV ಕಾರು ಡಿಕ್ಕಿ, ವರ ಸೇರಿ 8 ಮಂದಿ ಸಾವು | Accident

05/07/2025 11:10 AM

BREAKING : ಕೊಡವ ಸಮುದಾಯದಿಂದ ಇಂಡಸ್ಟ್ರಿಗೆ ಬಂದ ಮೊದಲ ನಟಿ ನಾನೇ : ನಟಿ ರಶ್ಮಿಕಾ ಮಂದಣ್ಣ ವಿವಾದ | WATCH VIDEO

05/07/2025 11:07 AM

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ರಾಜ್ಯಾದ್ಯಂತ ಏಕಕಾಲಕ್ಕೆ 393 ಆಶಾಕಿರಣ ದೃಷ್ಟಿಕೇಂದ್ರಗಳು ಆರಂಭ.!

05/07/2025 11:06 AM

Big Updates: ಅಮರನಾಥ ಯಾತ್ರೆಗೆ ಹೊರಟಿದ್ದ ಬಸ್‌ಗಳ ಡಿಕ್ಕಿ: 36 ಯಾತ್ರಿಕರಿಗೆ ಗಾಯ | Accident

05/07/2025 11:06 AM
State News
KARNATAKA

BREAKING : ಕೊಡವ ಸಮುದಾಯದಿಂದ ಇಂಡಸ್ಟ್ರಿಗೆ ಬಂದ ಮೊದಲ ನಟಿ ನಾನೇ : ನಟಿ ರಶ್ಮಿಕಾ ಮಂದಣ್ಣ ವಿವಾದ | WATCH VIDEO

By kannadanewsnow0505/07/2025 11:07 AM KARNATAKA 1 Min Read

ಬೆಂಗಳೂರು :  ನಟಿ ರಶ್ಮಿಕಾ ಮಂದಣ್ಣ ಈ ಹಿಂದೆ ಕನ್ನಡಿಗರನ್ನು ಕೆಣಕಿ ಹಲವು ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸಿದ್ದರು.…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ರಾಜ್ಯಾದ್ಯಂತ ಏಕಕಾಲಕ್ಕೆ 393 ಆಶಾಕಿರಣ ದೃಷ್ಟಿಕೇಂದ್ರಗಳು ಆರಂಭ.!

05/07/2025 11:06 AM

BIG NEWS : ರಾಜ್ಯದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಡತ ನಿರ್ವಹಣೆಗೆ `ಡಿಜಿಟಲ್ ವ್ಯವಸ್ಥೆ’ ಜಾರಿ

05/07/2025 11:02 AM

BREAKING : ದೇಶದ 2ನೇ ಅತೀ ಉದ್ದದ ಸಿಗಂದೂರು ಸೇತುವೆ ಜು.14ರಂದು ಲೋಕಾರ್ಪಣೆ : ಸಂಸದ ಬಿವೈ ರಾಘವೇಂದ್ರ

05/07/2025 10:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.