ಮೈಸೂರು: ಪ್ರೀತಿಯ ವಿಚಾರಕ್ಕೆ ಶಿಕ್ಷಕಿಯ ಮೇಲೆ ಹಲ್ಲೆ ಮಾಡಿದ್ದಲ್ಲದೇ ಆಕೆಯನ್ನು ಚಾಕುವಿನಿಂದ ಇರಿದು ಯುವಕನೊಬ್ಬ ಹತ್ಯೆ ಮಾಡಿರುವಂತ ಘಟನೆ ಮೈಸೂರಲ್ಲಿ ನಡೆದಿದೆ.
ಮೈಸೂರಿನ ಅಶೋಕಪುರಂನಲ್ಲಿ ಪಾಂಡವಪುರ ಎಲೆಕೆರೆ ಹ್ಯಾಂಡ್ ಪೋಸ್ಟ್ ಮೂಲದ ಪೂರ್ಣಿಮಾ(36) ಎಂಬಾಕೆಯನ್ನುಕ್ಯಾತನಹಳ್ಳಿ ಗ್ರಾಮದ ಅಭಿಷೇಕ್ ಎಂಬಾತ ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ.
ಅಂದಹಾಗೇ ಪೂರ್ಣಿಮಾ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಳು. ಆಕೆಯನ್ನು ಅಭಿಷೇಕ್ ಪ್ರೀತಿಸುತ್ತಿದ್ದನು. ಪ್ರೀತಿಯ ವಿಚಾರಕ್ಕಾಗಿ ಕೋಪಗೊಂಡ ಅಭಿಷೇಕ್ ಶಿಕ್ಷಕಿ ಪೂರ್ಣಿಮಾ ಮೇಲೆ ಚಾಕುವಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ. ಆ ಬಳಿಕ ಪರಾರಿಯಾಗಿದ್ದಾನೆ. ಚಾಕು ಇರಿತಕ್ಕೆ ಒಳಗಾದಂತ ಪೂರ್ಣಿಮಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿ ಅಭಿಷೇಕ್ ನನ್ನು ಬಂಧಿಸಿದ್ದಾರೆ.