ಚಿಕ್ಕಮಗಳೂರು: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ನಿಲ್ಲುವ ಹಾಗೆ ಕಾಣುತ್ತಿಲ್ಲ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಚಿಕ್ಕಮಗಳೂರಿನಲ್ಲಿ ಹೃದಯಾಘಾತಕ್ಕೆ ಒಂದೇ ದಿನ ಇಬ್ಬರು ಬಲಿಯಾಗಿದ್ದಾರೆ.
ಮೂಡಿಗೆರೆ ತಾಲೂಕಿನಲ್ಲಿ 29 ವರ್ಷದ ಮಹಿಳೆ ಹಾಗೂ 75 ವರ್ಷದ ವೃದ್ಧ ಇಬ್ಬರೂ ಒಂದೇ ದಿನ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಮೂಡಿಗೆರೆ ತಾಲೂಕಿನ ಬೆಳಗೋಡು ಗ್ರಾಮದ ಮೀನಾಕ್ಷಿ (29) ಮೃತ ಮಹಿಳೆ. ಹಾಗೂ ಬಿ.ಹೊಸಳ್ಳಿ ಗ್ರಾಮದ ಸುಮಿತ್ರೇಗೌಡ (75) ಮೃತರು. ಎದೆನೋವು ಕಾಣಿಸಿಕೊಂಡು ಕಾರಿನಲ್ಲಿಯೇ ಮಹಿಳೆ ಮೀನಾಕ್ಷಿ ಸಾವನ್ನಪ್ಪಿದ್ದಾರೆ. ಸುಮಿತ್ರೇಗೌಡ ಹೃದಯಾಘಾತದಿಂದ ಮನೆಯಲ್ಲಿಯೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ.