ಹುಬ್ಬಳ್ಳಿ : ಆರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಹುಬ್ಬಳ್ಳಿಯ ಘಂಟಿಕೇರಿ ಪೊಲೀಸ್ ಕಾನ್ಸ್ ಟೇಬಲ್ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.
ಘಂಟಿಕೇರಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಹಜರತ್ ಮಿಟ್ಟೆಖಾನ್ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಲಾಗಿದೆ. ಹುಬ್ಬಳ್ಳಿಯ ಘಂಟಿಕೇರಿ ಪೊಲೀಸ್ ಠಾಣೆಯಲ್ಲಿ ಕಾನ್ಸ್ ಟೇಬಲ್ ಆಗಿರುವ ಹಜರತ್ ಮಿಟ್ಟೆಖಾನ್ ಆರು ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಕೇಳಿ ಬಂದಿದೆ.
ದೂರು ಕೊಡಲು ಹೋಗಿದ್ದ ವ್ಯಕ್ತಿ ಪತ್ನಿ ಪರಿಚಯ ಮಾಡಿಕೊಂಡಿದ್ದ ಕಾನ್ಸ್ ಟೇಬಲ್ ಆ ಮಹಿಳೆ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದ, ಆಕೆ ಮಗಳ ಜೊತೆಗೆ ಅಶ್ಲೀಲವಾಗಿ ವರ್ತಿಸಿದ್ದಾನೆ ಹೀಗಾಗಿ ಕಾನ್ಸ್ ಟೇಬಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಾಲಕಿ ತಂದೆ ಒತ್ತಾಯಿಸಿದ್ದಾರೆ.