ಮೈಸೂರು: ಮುಖ್ಯಮಂತ್ರಿ ಸ್ಥಾನಕ್ಕೆ ಶೀಘ್ರವೇ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೊಸ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆದುಕೊಂಡು ದೆಹಲಿಗೆ ವರ್ಗಾವಣೆ ಮಾಡಲು ಪ್ಲಾನ್ ಮಾಡಿಕೊಳ್ಳಲಾಗಿದೆ. ಸಿದ್ದರಾಮಯ್ಯ ಸ್ಥಾನ ಪಲ್ಲಟ ಆಗುವುದು ನಿಶ್ಚಿತವಾಗಿದೆ ಎಂದರು.
ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯಲು ಭೂಮಿಕೆ ಸಜ್ಜಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಬೆಂಗಳೂರಿಗೆ ಬಂದು ಶಾಸಕರ ಅಭಿಪ್ರಾಯ ಪಡೆದುಕೊಂಡಿದ್ದಾರೆ. ಎಐಸಿಸಿ ಒಬಿಸಿ ವಿಭಾಗಕ್ಕೆ ಸಿದ್ಧರಾಮಯ್ಯ ಅವರನ್ನು ನೇಮಕ ಮಾಡಲಾಗಿದ್ದು, ಅವರ ರಾಜೀನಾಮೆ ಪಡೆದು ದೆಹಲಿಗೆ ವರ್ಗಾವಣೆ ಮಾಡಲು ಪ್ಲಾನ್ ಮಾಡಲಾಗಿದ್ದು, ಸಿದ್ದರಾಮಯ್ಯ ಸ್ಥಾನ ಪಲ್ಲಟವಾಗುವುದು ನಿಶ್ಚಿತವಾಗಿದೆ ಎಂದು ಹೇಳಿದ್ದಾರೆ.