ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಇದೀಗ ಪಶ್ಚಿಮ ಬಂಗಾಳದಲ್ಲಿ ಕರ್ತವ್ಯದಲ್ಲಿದ್ದ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಹೃದಯಾಘಾತದಿಂದ ಯೋಧ ಗಂಗಾಧರಪ್ಪ (54) ಸಾವವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಗ್ರಾಮದ ಗಂಗಾಧರಪ್ಪ, ಪಶ್ಚಿಮ ಬಂಗಾಳದಲ್ಲಿ ಇಂಡೋ ಟಿಬೇಟಿಯನ್ ಬಾರ್ಡರ್ ಪೋರ್ಸ್ ನಲ್ಲಿ ಹವಾಲ್ದಾರ್ ಆಗಿದ್ದರು.
ನಿನ್ನೆ ಬೆಳಗ್ಗೆ ಹೃದಯಾಘಾತದಿಂದ ಯೋಧ ಗಂಗಾಧರಪ್ಪ ಮೃತಪಟ್ಟಿದ್ದಾರೆ. ತೊಂಡೇಬಾವಿ ಗ್ರಾಮಕ್ಕೆ ಐಟಿಬಿಪಿ ಪಡೆ ಪಾರ್ಥಿವ ಶರೀರ ತರುತ್ತಿದ್ದು, ಇಂದು ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.