ಚಿಕ್ಕಬಳ್ಳಾಪುರ: ಬೆಂಗಳೂರಿಗರ ನಿದ್ದೆ ಕೆಡಿಸಿದ್ದ ಚಡ್ಡಿಗ್ಯಾಂಗ್ ಇದೀಗ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರತ್ಯಕ್ಷವಾಗಿದೆ.
ಹೌದು, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಚಡ್ಡಿಗ್ಯಾಂಗ್ ದರೋಡೆಗೆ ಸಂಚು ಹಾಕುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಹಲವೆಡೆ ದರೋಡೆಗೆ ಸಂಚು ಹಾಕುತ್ತಿದ್ದ ಬಗ್ಗೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗೌರಿಬಿದನೂರು ನಗರದ ರೈಲ್ವೆ ನಿಲ್ದಾಣದ ಬಳಿ ಜುಲೈ 5ರಂದು ಮುಂಜಾನೆ 2:25ರ ಸುಮಾರಿಗೆ ಅಪರಿಚಿತ ಗ್ಯಾಂಗ್ವೊಂದು ಓಡಾಡಿದೆ. ನಾಲ್ವರ ಗ್ಯಾಂಗ್ ಚಡ್ಡಿ ಧರಿಸಿದ್ದು, ಮುಖಕ್ಕೆ ಬಟ್ಟೆ ಸುತ್ತಿಕೊಂಡು, ಸೊಂಟದಲ್ಲಿ ಮಾರಕಾಸ್ತ್ರಗಳನ್ನು ಕಟ್ಟಿಕೊಂಡು ದರೋಡೆಗೆ ಯತ್ನಿಸುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ.
ಗೌರಿಬಿದನೂರು ನಗರ ಪೊಲೀಸ್ ಸಿಬ್ಬಂದಿ ತಡರಾತ್ರಿ ಗಸ್ತಿನಲ್ಲಿದ್ದಾಗ ಅಪರಿಚಿತ ವ್ಯಕ್ತಿಗಳು ಓಡಾಡುತ್ತಿರುವ ಬಗ್ಗೆ ಸುಳಿವು ಸಿಕ್ಕಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡುವ ವೇಳೆಗೆ ಚಡ್ಡಿ ಗ್ಯಾಂಗ್ ಪರಾರಿಯಾಗಿತ್ತು. ಸಾರ್ವಜನಿಕರು ಎಚ್ಚರದಿಂದ ಇರುವಂತೆ ಪೊಲೀಸರು ಮನವಿ ಮಾಡಿದ್ದಾರೆ.