ಮೈಸೂರು : ತಡರಾತ್ರಿ ಮೈಸೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಎರಡು ಬೈಕ್ ಗಳ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲಿಯೇ ಜೋಮ್ಯಾಟೋ ಫುಡ್ ಡೆಲಿವರಿ ಬಾಯ್ ಸೇರಿದಂತೆ ಇಬ್ಬರು ದುರ್ಮರಣ ಹೊಂದಿರುವ ಘಟನೆ ಎನ್.ಆರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹೌದು ಮೈಸೂರಿನಲ್ಲಿ ಎರಡು ಬೈಕ್ ಗಳ ಮಧ್ಯ ಈ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಜೋಮಾಟೋ ಫುಲ್ ಡೆಲಿವರಿ ಬಾಯ್ ಸೇರಿದಂತೆ ಇಬ್ಬರ ಸಾವಾಗಿದೆ. ಬೈಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಒಂದು ಬೈಕ್ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಹೊತ್ತಿ ಉರಿದಿದೆ.ಎನ್. ಆರ್. ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.