ರಾಮನಗರ : ಒಂದು ಕಡೆ ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡುತ್ತಿದ್ದರೆ, ಇನ್ನೊಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿತ ಹಲವು ಶಾಸಕರು ಡಿಕೆ ಶಿವಕುಮಾರ್ ಶೀಘ್ರದಲ್ಲಿ ಸಿಎಂ ಆಗಲಿದ್ದಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಇದರ ಮಧ್ಯ ರಂಭಾಪುರಿ ಶ್ರೀಗಳು ಜನರಿಗೆ ಡಿಕೆ ಶಿವಕುಮಾರ್ ಅವರನ್ನು ಉನ್ನತ ಸ್ಥಾನದಲ್ಲಿ ನೋಡುವಂತಾಗಲಿ ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಹೇಳಿಕೆ ನೀಡಿದ್ದಾರೆ.
ಹೌದು ಜನರು ಡಿಕೆ ಶಿವಕುಮಾರ್ ಅವರನ್ನು ಉನ್ನತ ಸ್ಥಾನದಲ್ಲಿ ನೋಡುವ ಭಾಗ್ಯ ಸಿಗಲಿ ಎಂದು ಕನಕಪುರ ತಾಲೂಕಿನ ಬೆಜ್ಜವಳ್ಳಿ ಗ್ರಾಮದಲ್ಲಿ ರಂಭಾಪುರಿ ಶ್ರೀಗಳು ಹೇಳಿಕೆ ನೀಡಿದರು. ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಬೆಜ್ಜವಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಶಕ್ತಿ ತಂದುಕೊಟ್ಟಿದ್ದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್. ಡಿಕೆ ಶಿವಕುಮಾರ್ ಅವರಿಗೆ ಉನ್ನತ ಸ್ಥಾನ ಸಿಗಬೇಕಿತ್ತು. ವರಿಷ್ಠರ ಸಮ್ಮುಖದಲ್ಲಿ ನಡೆದ ಮಾದನಂತೆ ಮುಂದೆ ಅವಕಾಶ ಕಲ್ಪಿಸಬೇಕು. ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ರಂಭಾಪುರಿ ಶ್ರೀಗಳು ಪರೋಕ್ಷವಾಗಿ ಆಶೀರ್ವದಿಸಿದರು.
ಡಿಕೆ ಶಿವಕುಮಾರ್ ಮುಂದೆ ಗಟ್ಟಿ ನಿರ್ಧಾರ ಕೈಗೊಳ್ಳಬೇಕೆಂಬ ನಂಬಿಕೆ ಶಿವಕುಮಾರ್ ದೇವರು, ಧರ್ಮ, ಗುರುಗಳಲ್ಲಿ ಅಪಾರ ನಂಬಿಕೆ ಇಟ್ಟಿದ್ದಾರೆ. ಡಿಕೆ ಶಿವಕುಮಾರ್ ಬಾಯಲ್ಲಿ ಲೌಕಿಕ ಮತ್ತು ಆಧ್ಯಾತ್ಮಿಕ ತಿರುಳು ಇದೆ. ಹಲವು ರಾಜಕಾರಣಿಗಳ ಬಾಯಲ್ಲಿ ಇಂಥ ಮಾತು ಬರುವುದು ಕಷ್ಟ ಎಂದು ಕನಕಪುರ ತಾಲೂಕಿನ ಬೆಜ್ಜವಳ್ಳಿ ಗ್ರಾಮದಲ್ಲಿ ರಂಭಾಪುರಿ ಶ್ರೀಗಳು ಹೇಳಿಕೆ ನೀಡಿದರು.