ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಮಹಾಲಕ್ಷ್ಮಿ ದೇವಿ ದರ್ಶನ ಪಡೆದು ವಾಪಸ್ ತೆರಳುವ ವೇಳೆ ಕಾರಿಗೆ ಕೆಎಸ್ಆರ್ಟಿಸಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನಪ್ಪಿದ್ದು, ಓರ್ವ ಮಹಿಳೆಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದಿದೆ.
ಹೌದು KSRTC ಬಸ್ ಡಿಕ್ಕಿ ಆಗಿ ಕಾರಿನಲ್ಲಿ ಮೂವರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಬಳಿ ಈ ಒಂದು ಘಟನೆ ನಡೆದಿದ್ದು, ಮೃತರೆಲ್ಲರೂ ಕಲಬುರ್ಗಿ ಜಿಲ್ಲೆಯ ಅಫ್ಜಲ್ಪುರ ತಾಲೂಕಿನವರು ಎಂದು ತಿಳಿದು ಬಂದಿದೆ. ಮೃತರನ್ನು ಗಿರೀಶ್ ಬಳ್ಳೂರ್ಗಿ, ರಾಹುಲ್ ಮತ್ತು ಸಂಗು ಅಮರಗೊಂಡ ಎಂದು ತಿಳಿದುಬಂದಿದೆ ಗಂಭೀರವಾಗಿ ಗಾಯಗೊಂಡ ರಾಧಿಕಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.