ಯಾದಗಿರಿ : ಇತ್ತೀಚೆಗೆ ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಹಾಸನದಲ್ಲಿ ಕಳೆದ 45 ದಿನಗಳಲ್ಲಿ 35ಕ್ಕೂ ಹೆಚ್ಚು ಜನರು ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಇದೀಗ ಇಂದು ಯಾದಗಿರಿಯಲ್ಲಿ ಮೊಹರಂ ಹಬ್ಬದ ದಿನದಂದೇ ಘೋರ ದುರಂತ ನಡೆದಿದ್ದು, ಕೆಂಡ ತುಳಿದ ಕೆಲವೇ ಕ್ಷಣಗಳಲ್ಲಿ ವ್ಯಕ್ತಿಯೊಬ್ಬರು ಹಾರ್ಟ್ ಅಟ್ಯಾಕ್ ಗೆ ಬಲಿಯಾಗಿದ್ದಾರೆ.
ಹೌದು ಮೊಹರಂ ಅಗ್ನಿಕುಂಡ ತುಳಿದ ಕೆಲವೇ ಗಂಟೆಗಳಲ್ಲಿ ಹಳ್ಳೆಪ್ಪ ಪೂಜಾರಿ (44) ಎನ್ನುವವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಶೆಟ್ಟಿಕೆರೆ ಗ್ರಾಮದ ಹಳ್ಳೆಪ್ಪ ಪೂಜಾರಿಗೆ ಅಗ್ನಿಕುಂಡ ತುಳಿದ ಕೆಲವೇ ಕ್ಷಣಗಳಲ್ಲಿ ಹೃದಯಾಘಾತವಾಗಿದೆ. ಮಧ್ಯರಾತ್ರಿ ಮೊಹರಂ ಹಬ್ಬದ ನಿಮಿತ್ಯವಾಗಿ ಅಗ್ನಿಕುಂಡ ತುಳಿದು ಮನೆಗೆ ತೆರಳಿರುತ್ತಾರೆ. ಈ ವೇಳೆ ಹೃದಯಾಘಾತದಿಂದ ಹಳ್ಳೆಪ್ಪ ಪೂಜಾರಿ ಸಾವನ್ನಪ್ಪಿದ್ದಾರೆ.