ಬೆಂಗಳೂರು : ಬೆಂಗಳೂರಿನಲ್ಲಿ ಭಾರಿ ಬಿರುಗಾಳಿಗೆ ಸದಾಶಿವ ನಗರದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಿವಾಸದ ಬಳಿಯೇ ಬೃಹತ್ ಗಾತ್ರದ ಮರ ಒಂದು ಉರುಳಿ ಬಿದ್ದಿರುವ ಘಟನೆ ನಡೆದಿದೆ.
ಹೌದು ಬೆಂಗಳೂರಿನ ಸದಾಶಿವನಾಗರದ ಡಿಸಿಎಂ ಡಿಕೆ ಶಿವಕುಮಾರ್ ಅವರ ನಿವಾಸದ ಬಳಿ ಬೃಹತ್ ಗಾತ್ರದ ಮರ ಒಂದು ಧರೆಗುರುಳಿ ಬಿದ್ದಿದೆ. ಪರಿಣಾಮ ಮರದ ಕೆರೆಗೆ ಇದ್ದಂತಹ ಎಲೆಕ್ಟ್ರಿಕ್ ಕಾರು ಸಂಪೂರ್ಣವಾಗಿ ಜಖಂ ಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಬಿಬಿಎಂಪಿ ಸಿಬ್ಬಂದಿಗಳು ಬಂದು ಮರ ತೆರವು ಕಾರ್ಯಾಚರಣೆ ನಡೆಸಿದ್ದಾರೆ.