ಚಿಕ್ಕಮಗಳೂರು : ಚಿಕ್ಕಮಂಗಳೂರಲ್ಲಿ ಘೋರವಾದ ಘಟನೆ ನಡೆದಿದ್ದು, ಕಾಡುಕೋಣೆ ದಾಳಿಗೆ 52 ವರ್ಷದ ವ್ಯಕ್ತಿ ಒಬ್ಬರು ಬಲಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದ ಹಳ್ಳಿಯಲ್ಲಿ ಈ ಒಂದು ಘಟನೆ ಸಂಭವಿಸಿದೆ.
ಕಾಡುಕೋಣ ದಾಳಿಯಿಂದ ರಮೇಶ್ (52) ಸ್ಥಳದಲ್ಲಿ ಸಾವನಪ್ಪಿದ್ದಾರೆ. ಕಾಫಿ ತೋಟದಲ್ಲಿ ರಮೇಶ್ ಕೆಲಸ ಮಾಡುವಾಗ ಏಕಾಏಕಿ ಕಾಡುಕೋಣ ದಾಳಿ ನಡೆಸಿದೆ. ಈ ವೇಳೆ ರಮೇಶ್ ಸ್ಥಳದಲ್ಲಿ ಸಾವನ್ನಪ್ಪಿದ್ದು, ಸದ್ಯ ರಮೇಶ್ ಮೃತದೇಹವನ್ನು ಕಳಸ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.