ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೌರ್ಜನ್ಯ ನಡೆಸಿದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ. ಪುರುಷೋತ್ತಮ (43) ಹಾಗೂ ರಾಮಚಂದ್ರ (38) ಎಂಬ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಂತ್ರಸ್ತ ಬಾಲಕನ ತಂದೆ ನೀಡಿದ ದೂರನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇಬ್ಬರು ಅಪ್ರಾಪ್ತರು ಒಂದೇ ಧರ್ಮಕ್ಕೆ ಸೇರಿದವರು. ಘಟನೆಯ ಸಂಬಂಧ ಬಾಲಕನ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನನ್ನ ಮಗ ಮತ್ತು ಬಾಲಕಿಗೆ ಇಬ್ಬರು ಕಿರುಕುಳ ನೀಡಿದ್ದಾರೆ ಎಂದು ದೂರು ನೀಡಿದ್ದಾರೆ. ಬೇರೆ ಧರ್ಮದವರೆಂದು ಅನುಮಾನದಿಂದ ತೊಂದರೆ ನೀಡಿದ್ದಾರೆ. ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವಿಡಿಯೋ ಮಾಡಿ ಹರಿಬಿಟ್ಟಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದೇವೆ. ಇಬ್ಬರನ್ನು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಇಬ್ಬರು ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಹೇಳಿಕೆ ನೀಡಿದರು.